ಇಂಡಿಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ್ ಮತದಾನ- ಕಾಂಗ್ರೆಸ್ ಅಭ್ಯರ್ಥಿ ಸುನಿಲಗೌಡ ಪಾಟೀಲ ಗೆಲುವು ಖಚಿತ ಎಂದ ಇಂಡಿ ಶಾಸಕ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಮತದಾನ ಬಿರುಸಿನಿಂದ ಸಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ಪುರಸಭೆ ಮತಗಟ್ಟೆಯಲ್ಲಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮತದಾನದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಸುನಿಲಗೌಡ ಪಾಟೀಲ ಅತೀ ಹೆಚ್ಚು ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದು ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ, ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಲಿಯಾಸ್ ಬೊರಾಮಣಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌