ಆಲಮಟ್ಟಿಯಲ್ಲಿ 24 ಸದಸ್ಯರಿಂದ ಒಟ್ಟಾಗಿ ಬಂದು ಮತ ಚಲಾವಣೆ

  1. ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಒಟ್ಟಾಗಿ ಬಂದು ತಮ್ಮ ಮತ ಚಲಾಯಿಸಿ ಗಮನ ಸೆಳೆದಿದ್ದಾರೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಡ ಸದಸ್ಯರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಆಲಮಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 26 ಜನ ಸದಸಸ್ಯರಲ್ಲಿ 24 ಜನ ಸದಸ್ಯರು ಗ್ರಾಮ ಪಂಚಾಯಿತಿಯ ಮತಗಟ್ಟೆಗೆ ಬಂದು ತಮ್ಮ ಮತ ಚಲಾಯಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಬಳಿಕ ಫೋಟೋ ತೆಗೆಸಿಕೊಂಡಿದ್ದಾರೆ.

Leave a Reply

ಹೊಸ ಪೋಸ್ಟ್‌