ಶಾಸಕ ಎ. ಎಸ್ ಪಾಟೀಲ ನಡಹಳ್ಳಿ ಮತದಾನ- ಬಿಜೆಪಿ ಪಿ. ಎಚ್. ಪೂಜಾರ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಶಾಸಕ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಮುದ್ದೇಬಿಹಾಳ ಪುರಸಭೆಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1100 ಮತದಾರರಿದ್ದು, ಅವರಲ್ಲಿ ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ 900 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.

Leave a Reply

ಹೊಸ ಪೋಸ್ಟ್‌