ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಒಟ್ಟಾಗಿ ಬಂದು ತಮ್ಮ ಮತ ಚಲಾಯಿಸಿ ಗಮನ ಸೆಳೆದಿದ್ದಾರೆ.
ವಿಜಯಪುರ ತಾಲೂಕಿನ ಅರಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಡ ಸದಸ್ಯರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಅರಕೇರಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 29 ಜನ ಸದಸ್ಯರಿದ್ದು, ಅವರಲ್ಲಿ ಓರ್ವ ಸದಸ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪುಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 28 ಜನ ಸದಸ್ಯರು ಅರಕೇರಿ ಗ್ರಾಮ ಪಂಚಾಯಿತಿಯ ಮತಗಟ್ಟೆಗೆ ಬಂದು ತಮ್ಮ ಮತ ಚಲಾಯಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಬಳಿಕ ಫೋಟೋ ತೆಗೆಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅರ್ಜುನ ಹೀರು ರಾಠೋಡ ಕೂಡ ಉಪಸ್ಥಿತರಿದ್ದರು.