ವಿಪ ಚುನಾವಣೆ: ಯಾವ ಅಭ್ಯರ್ಥಿ ಎಷ್ಟು ಮತಗಳನ್ನು ಪಡೆದಿದ್ದಾರೆ? ಇಲ್ಲಿದೆ ಮಾಹಿತಿ
ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ. ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಪ್ರಥಮ ಸುತ್ತಿನಲ್ಲಿಯೇ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಎರಡನೇ ಸುತ್ತಿನಲ್ಲಿ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಪ್ರಥಮ ಸುತ್ತಿನಲ್ಲಿ ಅಭ್ಯರ್ಥಿಗಳು ಪಡೆದ ಪ್ರಥಮ ಪ್ರಾಶಸ್ತ್ಯದ ಮತಗಳ ವಿವರ ಪಿ. ಎಚ್. ಪೂಜಾರ(ಬಿಜೆಪಿ)- 2219 ಸುನೀಲಗೌಡ ಪಾಟೀಲ(ಕಾಂಗ್ರೆಸ್)- 3245 ಕಾಂತಪ್ಪ(ಕಾಂತು) ಶಂಕ್ರೆಪ್ಪ ಇಂಚಗೇರಿ(ಪಕ್ಷೇತರ)- 11 ದುರ್ಗಪ್ಪ ಭರಮಪ್ಪ ಸಿದ್ದಾಪುರ(ಪಕ್ಷೇತರ)- 4 […]
ನಿರೀಕ್ಷೆಯಂತೆ ಗೆದ್ದು ಬೀಗಿದ ಕಾಂಗ್ರೆಸ್, ಬಿಜೆಪಿ- ದ್ವಿತೀಯ ಸ್ಥಾನಕ್ಕೆ ಟಫ್ ಫೈಟ್ ನೀಡಿದ ಪಕ್ಷೇತರ ಅಭ್ಯರ್ಥಿ
ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಭ್ಯರ್ಥಿ ಮತ್ತು ವಿಧಾನ ಪರಿಷತ ಹಾಲಿ ಸದಸ್ಯ ಸುನೀಲಗೌಡ ಪಾಟೀಲ ಮತ್ತು ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರಿ ಗೆಲುವು ಸಾಧಿಸುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲ ಸಾಧಿಸಿದಂತಾಗಿದೆ. ಬೆಳಿಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ನಿರೀಕ್ಷೆಯಂತೆ ಭಾರಿ ಮತಗಳ ಅಂತರದಿಂದ […]
ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಗೆಲುವು
ವಿಜಯಪುರ: ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಕೊನೆಗೂ ಗೆದ್ದು ಜಯದ ನಗೆ ಬೀರಿದ್ದಾರೆ. ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಿ. ಎಚ್. ಪೂಜಾರ ನಿಗದಿತ ಮತಗಳ ಗುರಿ ತಲುಪಿ ವಿಜಯಿಯಾದರು. ತೀವ್ರ ಪೈಪೋಟಿ ನೀಡಿದ್ದ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಸೋಲು ಅನುಭವಿಸಬೇಕಾಯಿತು.
ಸುನೀಲಗೌಡ ಪಾಟೀಲ ಮನೆಯಲ್ಲಿ ಸಂಭ್ರಮ- ಪತ್ನಿ, ಸಹೋದರಿ, ಬೆಂಬಲಿಗರಿಂದ ವಿಜಯೋತ್ಸವ
ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಸುನೀಲಗೌಡ ಪಾಟೀಲ ಗೆಲುವು ಸಾಧಿಸುತ್ತಿದ್ದಂತೆಯೇ ಅವರ ಮನೆಯಲ್ಲಿ ಮತ್ತು ಮನೆಯ ಹೊರಗಡೆ ವಿಜಯೋತ್ಸವ ಆಚರಿಸಲಾಯಿತು. ಕಾಂಗ್ರೆಸ್ ಎಂ ಎಲ್ ಸಿ ಸುನೀಲಗೌಡ ಪಾಟೀಲ ಅವರ ಮನೆಯಲ್ಲಿ ಅವರ ಪತ್ನಿ ರೇಣುಕಾ, ಸಹೋದರಿ ಕಲ್ಪನಾ, ಪುತ್ರಿ ಸಾನ್ವಿ, ಪುತ್ರ ಸಿದ್ದಾಂತ ಗುಲಾಲ ಹಚ್ಚಿ ಶುಭ ಕೋರಿ ಸಂಙ್ರಮಿಸಿದರು. ಇದೇ ಸಂದರ್ಭದಲ್ಲಿ ಸುನೀಲಗೌಡ ಪಾಟೀಲ ಅವರ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಅಲ್ಲದೇ, ಅವರ […]
ವಿಪ ಚುನಾವಣೆ: ಗೆಲುವಿನತ್ತ ಸುನೀಲಗೌಡ ಪಾಟೀಲ- ಅಧಿಕೃತ ಘೋಷಣೆ ಬಾಕಿ
ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಎರಡನೇ ಬಾರಿ ವಿಧಾನ ಪರಿಷತ್ತಿಗೆ ಆಯ್ಜೆ ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ಈವರೆಗೆ ನಡೆದ ಮತ ಎಣಿಕೆಯಲ್ಲಿ ಸುನೀಲಗೌಡ ಪಾಟೀಲ- 3332 ಮತಗಳನ್ನು ಪಡೆದು ಆಯ್ಜೆಯಾಗಿದ್ದು, ಅಧಿಕೃತ ಅಂಕಿ-ಅಂಶಗಳು ಬರಬೇಕಿದೆ. ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ-2222ಮತ್ತು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ- 1459 ಮತಗಳನ್ನು ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಪ ಚುನಾವಣೆ: 4000 ಮತಗಳನ್ನು ಪಡೆದು ಗೆಲ್ಲುವೆ- ಮಲ್ಲಿಕಾರ್ಜುನ ಲೋಣಿ
ವಿಜಯಪುರ : ವಿಧಾನ ಪರಿಷತ ಚುನಾವಣೆಯಲ್ಲಿ 4000 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲ್ಲುವುದಾಗಿ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ವಿಶ್ಬಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ವಿ. ಭ. ದರಬಾರ ಹೈಸ್ಕೂಲ್ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಈ ಚುನಾವಣೆಯಲ್ಲಿ ಶೇ. 100 ರಷ್ಟು ಗೆಲ್ಲುವ ವಿಶ್ವಾಸವಿದೆ. ಎಲ್ಲ ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ನನಗೆ ಮತ ಹಾಕುವ ಮೂಲಕ ತಮ್ಮ ಅಭಿಮಾನವನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಖಂಡಿತವಾಗಿಯೂ […]
ವಿಪ ಚುನಾವಣೆ: ವಿಜಯಪುರ ದ್ವಿಸದಸ್ಯ ಸ್ಥಾನದ ಮತ ಎಣಿಕೆ ಪ್ರಕ್ರಿಯೆ ಆರಂಭ
ವಿಜಯಪುರ: ವಿಜಯಪುರ ಮತ್ತು ಬಾಗಲಕೋಟ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಜೆ ನಡೆಯುತ್ತಿರುವ ಚುನಾವಷೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮತ ಪೆಟ್ಟಿಗೆ ಇಡಲಾಗಿದ್ದ ಸ್ಟ್ರಾಂಗ್ ರೂಂ ನ್ನು ಚುನಾವಣೆ ಅಧಿಕಾರಿಗಳು ಮಾಡಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಪಿ. ಸುನೀಲ ಕುಮಾರ, ಚುನಾವಣೆ ವೀಕ್ಷಕ ಎಲ್. ಕೆ. ಅತೀಕ, ಎಸ್ಪಿ ಎಚ್. ಡಿ. ಆನಂದ ಕುಮಾರ, ನಾನಾ ಅಧಿಕಾರಿಗಳು, […]