ವಿಪ ಚುನಾವಣೆ: ವಿಜಯಪುರ ದ್ವಿಸದಸ್ಯ ಸ್ಥಾನದ ಮತ ಎಣಿಕೆ ಪ್ರಕ್ರಿಯೆ ಆರಂಭ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಜೆ ನಡೆಯುತ್ತಿರುವ ಚುನಾವಷೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

 

ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮತ ಪೆಟ್ಟಿಗೆ ಇಡಲಾಗಿದ್ದ ಸ್ಟ್ರಾಂಗ್ ರೂಂ ನ್ನು ಚುನಾವಣೆ ಅಧಿಕಾರಿಗಳು ಮಾಡಿದ್ದಾರೆ.

 

ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಪಿ. ಸುನೀಲ ಕುಮಾರ, ಚುನಾವಣೆ ವೀಕ್ಷಕ ಎಲ್. ಕೆ. ಅತೀಕ, ಎಸ್ಪಿ ಎಚ್. ಡಿ. ಆನಂದ ಕುಮಾರ, ನಾನಾ ಅಧಿಕಾರಿಗಳು, ನಾನಾ ಅಭ್ಯರ್ಥಿಗಳು ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

ಎರಡು ಪ್ರತ್ಯೇಕ ಕೊಠಡಿಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಎರಡೂ ಕೊಠಡಿಗಳಲ್ಲಿ ತಲಾ ಏಳರಂತೆ ಒಟ್ಟು 14 ಟೇಬಲ್ ಗಳಲ್ಲಿ ಮತ ಎಣಿಕೆ ನಡೆಯಲಿದೆ.

ಮತ ಎಣಿಕೆ ಕೇಂದ್ರದ ಸುತ್ತಮುತ್ತ ಬಿಗೀ ಪೊಲೀಸ್ ಬಂದೋವಸ್ತ್ ವ್ಯವಸ್ಥೆ ಮಾಡಲಾಗಿದೆ.

Leave a Reply

ಹೊಸ ಪೋಸ್ಟ್‌