ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಮತ್ತು ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು. ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.