ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಧಾನ ಸಮಾರಂಭ

ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು.

ವಿಜಯಪುರ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ವಿಜಯಪುರದ ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ 2021ನೇ ವರ್ಚದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಖ್ಯಾತ ಕವಿ ಡಾ. ಅರವಿಂದ ಮಾಲಗತ್ತಿ ಅವರಿಗೆ ಅವರ ಕಾವ್ಯ ಸಾಧನೆಗಾಗಿ ಹಲಸಂಗಿ ಗೆಳೆಯರ ಪ್ರತಿಷ್ಠಾನದ 2021 ನೇ ವರ್ಷದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೇ, ಡಾ. ಬಸವರಾಜ ಕಲ್ಗುಡಿ ಅವರಿಗೆ ಸಂಶೋಧನೆ ಮತ್ತು ವಿಮರ್ಶೆ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ಡಾ. ಗಾಯತ್ರಿ ನಾವಡ ಅವರಿಗೆ ಜಾನಪದ ಸಾಹಿತ್ಯ ಸಾಧನೆಗೆ, ಮಧು ಬಿರಾದಾರ ಅವರಿಗೆ ಯುವ ಸಾಹಿತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಹಿರಿಯ ಕವಿಗಳಾದ ಬೆಂಗಳೂರಿನ ಡಾ. ಎಚ್. ಎಸ್ ಶಿವಪ್ರಕಾಶ ಅವರು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪತ್ರ, ಫಲಕ, ನಗದು ಬಹುಮಾನ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಡಾ. ಎಚ್. ಟಿ ಪೋತೆ, ಕೋಲಾರದ ಸಾಹಿತಿಗಳು ಹಾಗೂ ಸಂಸ್ಕೃತಿ ಚಿಂತಕರಾದ ಡಾ. ವಿ. ಚಂದ್ರಶೇಖರ ನಂಗಲಿ, ತುಮಕೂರಿನ ಸಂಸ್ಕೃತಿ ಚಿಂತಕರಾದ ಡಾ. ಎಸ್ ನಟರಾಜ ಬೂದಾಳು, ಪ್ರತಿಷ್ಠಾನದ ಸದಸ್ಯ ಸಂಚಾಲಕ ದೊಡ್ಡಣ್ಣ ಭಜಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಈರಪ್ಪ ಆಶಾಪೂರ, ಡಾ. ಎಂ. ಎಸ್. ಮದಭಾವಿ ಸೇರಿದಂತೆ ಇತರ ಗಣ್ಯರು, ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌