ಬೊಮ್ಮಾಯಿ ಬದಲಾವಣೆ ಮಾಡಿದರೆ ತಪ್ಪು ಸಂದೇಶ- ಬೊಮ್ಮಾಯಿ ಪರ ಮತ್ತೋಮ್ಮೆ ಸಂಸದ ರಮೇಶ ಜಿಗಜಿಣಗಿ ಭರ್ಜರಿ ಬ್ಯಾಟಿಂಗ್
ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ವಿಷಯ ಕುರಿತು ಎದ್ದಿರುವ ಅಪಸ್ವರಕ್ಕೆ ಪಕ್ಷದ ವರಿಷ್ಠರ ಸ್ಪಷ್ಟ ಅಭಿಪ್ರಾಯ ಅಗತ್ಯ ಎಂಬ ಮಾತುಗಳು ಕಾರ್ಯಕರ್ತರಲ್ಲಿ ವ್ಯಾಪಕವಾಗಿ ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚೆನ್ನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಈಗ ನೂರು ದಿನಗಳು ಕಳೆದಿವೆ. ಆಗಲೇ ಅವರನ್ನು ಬದಲಾಯಿಸುವ ಚರ್ಚೆ ನಡೆದದ್ದು ಅಸಮಾಧಾನ ಮೂಡಿಸಿದೆ ಎಂದು ತಿಳಿಸಿದ್ದಾರೆ. […]
ಘಟಪ್ರಭಾ ಅಚ್ಚುಕಟ್ಟಿಗೆ ಹಿಂಗಾರು ಹಂಗಾಮಿನಲ್ಲಿ ನೀರು: ಗೋವಿಂದ ಎಂ. ಕಾರಜೋಳ
ಬೆಳಗಾವಿ: ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಬಲದಂಡೆ ಕಾಲುವೆಗಳಿಗೆ 2021-22ನೇ ವರ್ಷದ ಹಿಡಕಲ್ ಜಲಾಶಾಯದಿಂದ ಹಿಂಗಾರು ಹಂಗಾಮಿನಲ್ಲಿ ರೈತರ ಕೃಷಿ ಜಮೀನುಗಳಿಗೆ ನೀರು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಈಗ ಜಲಾಶಯದಲ್ಲಿ ನೀರಾವರಿಗಾಗಿ 38.85 ಟಿಎಂಸಿ ನೀರು ಲಭ್ಯವಿದ್ದು, ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಡಿ. 18 ರಿಂದ ಜ. 7 ರವರೆಗೆ 20 ದಿನಗಳ ಕಾಲ ನೀರು ಹರಿಸಲಾಗುವುದು. ನಂತರ ಜ. 22 ರಿಂದ ಫೆ. 11ರ ವರೆಗೆ ಮತ್ತು ಫೆ. 26 ರಿಂದ .ಅ. […]
ಪುಂಡಾಟಿಕೆ ತಡೆಗೆ ನಿರ್ಣಾಯಕ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ
ಬೆಳಗಾವಿ: ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು. ಮಹಾರಾಷ್ಟ್ರ ಸರಕಸರದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರಕಾರಿ ವಾಹನಗಳ ರಕ್ಷಣೆಗೆ ಕ್ರಮ […]