ಬೆಳಗಾವಿ: ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು.
ಮಹಾರಾಷ್ಟ್ರ ಸರಕಸರದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರಕಾರಿ ವಾಹನಗಳ ರಕ್ಷಣೆಗೆ ಕ್ರಮ ಕೈಗೊಳ್ಳಯುವಂತೆ ಮನವಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾತಿ ತಿಳಿಸಿದರು,