ಡಿ. 30, 31 ರಂದು ಡಿಸಿ, ಜಿ. ಪಂ. ಸಿಇಓ ಗಳ ಜೊತೆ ಸಿಎಂ ಸಭೆ- ಸೂಕ್ತ ಮಾಹಿತಿ ನೀಡಲು ಡಿ. ರಂದೀಪ ಸೂಚನೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ.30 ಮತ್ತು 31 ರಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಮ್ಮೇಳನ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ. ರಂದೀಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ‌ ವಿಪತ್ತು ನಿರ್ವಹಣೆ ಅಧಿಕಾರಿಗಳು ಸಮೀಕ್ಷೆ ಮತ್ತು ಬೆಳೆ ಪರಿಹಾರ ಪಾವತಿ ಮತ್ತು ಪಾವತಿಯ ಬಿಡುಗಡೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಮನೆಗಳ ನಿರ್ಮಾಣ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮೂಲ ಸೌಕರ್ಯಗಳ ದುರಸ್ಥಿ, ಸ್ವನಿಧಿ ಮತ್ತು ಸ್ವಾಯತ ಯೋಜನೆಗಳ ವಿಮರ್ಶೆಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಸೂಚನೆ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಅಧಿಕಾರಿಗಳು ಜಲಶಕ್ತಿ ಯೋಜನೆಗಳ ಅನುಷ್ಠಾನ ಮತ್ತು ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ, ಸ್ವನಿಧಿ ಮತ್ತು ಸ್ವಾಯತ ಯೋಜನೆಗಳ ವಿಮರ್ಶೆಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಅವರು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪಿಂಚಣಿಗಳ ಪರಿಶೀಲನೆ ಮತ್ತು ಕೋವಿಡ್‌ನಿಂದ ಮರಣ ಹೊಂದಿದವರಿಗೆ ಪರಿಹಾರ ಪಾವತಿ ಬಿಡುಗಡೆ, ಕೋವಿಡ್ ಸಂಬಂಧಿತ ಸಮಸ್ಯೆಗಳು, ಆಯುಷ್ಮಾನ ಭಾರತ ಯೋಜನೆಯ ವಿಮರ್ಶೆಯ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಅವರು ಸೂಚನೆ ನೀಡಿದರು.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳು ಅಪೌಷ್ಠಿಕತೆ ಮತ್ತು ಬಾಲ್ಯ ವಿವಾಹಗಳ ಸಮಸ್ಯೆಗಳಿಗೆ ಸಂಬಂಧಿತ ಮಾಹಿತಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಡಿ. ರಂದೀಪ ಸೂಚನೆ ನೀಡಿದರು.

ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಅಮೃತ್ ಅಭಿಯಾನ ಯೋಜನೆಯ ಅನುಷ್ಠಾನ ಕುರಿತು, ವಸತಿ ಇಲಾಖೆ ಅಧಿಕಾರಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಮತ್ತು ಇನ್ನೀತರ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಅವರು ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪರಿಶಿಷ್ಟ ಜಾತಿ, ಪಂಗಡಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯ ಅನುಷ್ಠಾನದ ಕುರಿತು ಮಾಹಿತಿ ಒದಗಿಸಬೇಕು ಎಂದು ಅವರು ಸೂಚನೆ ನೀಡಿದರು.

ಕೃಷಿ ಇಲಾಖೆಯ ಅಧಿಕಾರಿಗಳು ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯ, ರೈತರ ಮಕ್ಕಳ ವಿದ್ಯಾರ್ಥಿ ವೇತನ ಯೋಜನೆಯ, ಬೀಜಗಳು ಮತ್ತು ರಸಗೊಬ್ಬರಗಳ ವಿತರಣೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಅವರು ಹೇಳಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಇ-ಆಡಳಿತ) ಅಧಿಕಾರಿಗಳು ಜನಸೇವಕ ಯೋಜನೆಯ ವಿನ್ಯಾಸ ಮತ್ತು ಅನುಷ್ಠಾನ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಬಲವರ್ಧನೆ ಮತ್ತು ಪರಿಹಾರ ಬಗ್ಗೆ ಮಾಹಿತಿ ಒದಗಿಸಬೇಕು. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿಯ ಬಗ್ಗೆ ಅಗತ್ಯ ಮಾಹಿತಿ ಒದಗಿಸಬೇಕು ಎಂದು ಡಿ. ರಂದೀಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಭೆಯಲ್ಲಿ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌