ವಿಜಯಪುರ: ಕೋವಿಡ್ ಹಿನ್ನೆಲೆ ವಿಶ್ವ ಮಾನವ ದಿನವನ್ನು ಸರಳ ಮತ್ತು ಸಾಂಕೇತಿಕವಾಗಿ ವಿಶ್ವ ಮಾನವ ದಿನವನ್ನು ಆಚರಿಸಲಾಯಿತು.
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ವಿಶ್ವಮಾನವ ದಿನವಾಗಿ ಆಚರಿಸುವ ಕಾರ್ಯಕ್ರಮವನ್ನು ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಸರಳ ಹಾಗೂ ಸಾಂಕೇತವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಸಾಹಿತಿಗಳು, ಗಣ್ಯರು ಹಾಗೂ ಮುಖಂಡರು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸೀಂಪೀರ ವಾಲಿಕಾರ, ಸೋಮನಗೌಡ ಕಲ್ಲೂರ, ಶರಣು ಸಬರದ, ದೇವೇಂದ್ರ ಮೀರೆಕರ, ಭೀಮರಾಯ ಜಿಗಜಿಣಗಿ, ಗಿರೀಶ ಕುಲಕರ್ಣಿ, ಸಾಹಿತಿಗಳಾದ ಲಾಯಪ್ಪ ಇಂಗಳೆ, ಮಂಜುನಾಥ ಎಸ್. ಕಟ್ಟಿಮನಿ ಮುಂತಾದವರು ಉಪಸ್ಥಿತರಿದ್ದರು.