ವಸ್ತುಗಳನ್ನು ಖರೀದಿಸುವಾಗ ವಸ್ತುವಿನ ಮೂಲ ಬೆಲೆಯನ್ನು ಕಡ್ಡಾಯವಾಗಿ ಪರೀಕ್ಷಿಸಿ- ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ಕರೆ

ವಿಜಯಪುರ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಕಡ್ಡಾಯವಾಗಿ ಆ ವಸ್ತುವಿನ ಮೂಲ ಬೆಲೆಯನ್ನು ಕಡ್ಡಾಯವಾಗಿ ಪರೀಕ್ಷಿಸಿ ಖರೀದಿಸಬೇಕು ಎಂದು ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ. ಜಿ. ಕುರವತ್ತಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, […]

ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿ ಜನವಿರೋಧಿ ಆಡಳಿತಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ- ಸಂಗಮೇಶ ಬಬಲೇಶ್ವರ

ವಿಜಯಪುರ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅತಿ ಹೆಚ್ಚಿನ ಸಂಖ್ಯೆಯಲ್ಲಿ  ಗೆಲ್ಲಿಸುವುದರ ಮೂಲಕ ಮತದಾರರು ಬಿಜೆಪಿಯ ಜನವಿರೋಧಿ ಆಡಳಿತಕ್ಕೆ ಜನ ತಕ್ಕ ಉತ್ತರ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿದೆ.  ಶ್ರೀಸಾಮಾನ್ಯರು ಬದುಕುವುದು ಕಷ್ಟವಾಗಿದೆ.  ರೈತ ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ.  ಇಂಥ ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿರುವವರು ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಜನ ತೀರ್ಮಾನಿಸಿದ್ದಾರೆ ಎಂದು […]

ಬಿ ಎಲ್ ಡಿ ಇ ಡೀಮ್ಡ್ ವಿವಿ 9ನೇ ಘಟಿಕೋತ್ಸವ: ತಂದೆಯಿಲ್ಲದ ಮಗಳ ಶ್ರಮಕ್ಕೆ ಸಿಕ್ತು 7 ಚಿನ್ನದ ಪದಕಗಳು

ವಿಜಯಪುರ: ಜಗತ್ತಿನಲ್ಲಿ ಬದಲಾವಣೆ ತರಲು ಶಿಕ್ಷಣ ಅತ್ಯತ್ತುಮ ಆಯುಧ ಎನ್ನುವ ನೆಲ್ಸೆನ್ ಮಂಡೆಲಾ ಅವರ ಸಂದೇಶ ಎಂದಿಗೂ ಪ್ರಸ್ತುತ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ(ನಿಮ್ಯಾನ್ಸ್) ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಹೇಳಿದರು. ವಿಜಯಪುರ ನಗರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ಪ್ರಧಾನ ಭಾಷಣ ಮಾಡಿದ ಅವರು ಇಂದು ಪದವಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೂ ನಿಮ್ಮ ಪದವಿಯ ಜೊತೆಗೆ ಹೆಚ್ಚಿನ ಜವಾಬ್ದಾರಿಯು ನಿಮ್ಮ ಹೆಗಲಿಗೆರಿದೆ. ಇನ್ನು ಮುಂದೆ […]

ಮತ್ತೆ ಹೊಸ ಬಾಂಬ್ ಹಾಕಿದ ಯತ್ನಾಳ- ರಾಜ್ಯ ರಾಜಕಾರಣದ ಬಿಜೆಪಿ ಫೈರ್ ಬ್ರ್ಯಾಂಡ್ ಹೇಳಿದ್ದೇನು ಗೊತ್ತಾ?

ವಿಜಯಪುರ: ಸದಾ ಒಂದಿಲ್ಲೋಂದು ಹೇಳಿಕೆ ನೀಡುತ್ತ ಸ್ವಪಕ್ಷೀಯರಿಂದಲೂ ಟೀಕೆಗೊಳಗಾದರೂ ರಾಜ್ಯ ರಾಜಕೀಯದ ಸರಿಯಾದ ಭವಿಷ್ಯವನ್ನೇ ನುಡಿಯುತ್ತಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಗ ಮ್ತತ್ತೋಂದು ಹೊಸ ಬಾಂಬ್ ಹಾಕಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಂಕ್ರಾಂತಿಯ ಬಳಿಕ ರಾಜ್ಯ ಸರಕಾರ ಮತ್ತು ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಂಕ್ರಾಂತಿಯ ಬಳಿಕ ರಾಜ್ಯ ಸಚಿವ ಸಚಿವ ಸಂಪುಟದಲ್ಲಿ […]

ಪ. ಪಂ. ಚುನಾವಣೆ: 3ರಲ್ಲಿ ಕಾಂಗ್ರೆಸ್, 1 ರಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ-, 2ರಲ್ಲಿ ಅತಂತ್ರ

ವಿಜಯಪುರ: ವಿಜಯಪುರ ಜಿಲ್ಲೆಯ ಆರು ನಾನಾ ಪಟ್ಟಣ ಪಂಚಾಯಿತಿಗಳಿಗೆ ನಡೆದ ಚುನಾವಣೆ ಕಾಂಗ್ರೆಸ್ ಪಾಳೆಯದಲ್ಲಿ ಸಂತಸ ಮೂಡಿಸಿದ್ದರೆ, ಮೂರು ಜನ ಬಿಜೆಪಿ ಶಾಸಕರಿರುವ ಪಟ್ಟಣ ಪಂಚಾಯಿತಿಗಳಲ್ಲಿ ಬಿಜೆಪಿ ಒಂದರಲ್ಲೂ ಸ್ಪಷ್ಟ ಬಹುಮತ ಪಡೆಯದಿರುವುದು ಕಮಲ ಪಾಳೆಯದಲ್ಲಿ ಆತಂಕ ಮೂಡಿಸಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ಪ್ರತಿನಿಧಿಸುವ ಕ್ಷೇತ್ರದಲ್ಲಿ ಬರುವ ನಾಲತವಾಡ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಶೂನ್ಯ ಸಂಪಾದನೆ ಮಾಡುವ ಮೂಲಕ ಧೂಳಿಪಟವಾಗಿದೆ.  ನಾಲತವಾಡ ಪ. ಪಂ.ಯ ಒಟ್ಟು 14 ಸ್ಥಾನಗಳಲ್ಲಿ ಕಾಂಗ್ರೆಸ್ […]

ರಾಜ್ಯ ಲಿಂಗಾಯತ ನೌಕರರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಎಂ. ಬಿ. ಪಾಟೀಲ

ವಿಜಯಪುರ: ರಾಜ್ಯ ಲಿಂಗಾಯತ ನೌಕರರ ಸಂಘದ 2022ನೇ ವರ್ಷದ ಕ್ಯಾಲೆಂಡರನ್ನು ಮಾಜಿ ಸಚಿವ, ಶಾಸಕ ಎಂ. ಬಿ. ಪಾಟೀಲ ಅವರು ವಿಜಯಪುರ ನಗರದ ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಲಿಂಗಾಯತ ನೌಕರರ ಸಂಘವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಲಿಷ್ಟವಾಗಿ ಬೆಳೆಯಲಿ ಮತ್ತು ದಿನದರ್ಶಿಕೆಯು ಬಸವ ತತ್ವದ ನಿಜಾಚರಣೆಗಳನ್ನು ಒಳಗೊಂಡಿದ್ದು ಉಪಯುಕ್ತ, ಸಂಗ್ರಹಿಸಿಡಬಲ್ಲ ಮಾಹಿತಿಗಳಿಂದ ತುಂಬಿದೆ. ಇದನ್ನು ಬಹಳ ಸಂತೋಷದಿಂದ ಬಿಡುಗಡೆಗೊಳಿಸಿದ್ದೇನೆ ಎಂದು ಹೇಳಿದರು.   ಈ ಸಂದರ್ಭದಲ್ಲಿ ರಾಜ್ಯ ಲಿಂಗಾಯತ ನೌಕರರ ಸಂಘದ […]