ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿ ಜನವಿರೋಧಿ ಆಡಳಿತಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ- ಸಂಗಮೇಶ ಬಬಲೇಶ್ವರ

ವಿಜಯಪುರ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅತಿ ಹೆಚ್ಚಿನ ಸಂಖ್ಯೆಯಲ್ಲಿ  ಗೆಲ್ಲಿಸುವುದರ ಮೂಲಕ ಮತದಾರರು ಬಿಜೆಪಿಯ ಜನವಿರೋಧಿ ಆಡಳಿತಕ್ಕೆ ಜನ ತಕ್ಕ ಉತ್ತರ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿದೆ.  ಶ್ರೀಸಾಮಾನ್ಯರು ಬದುಕುವುದು ಕಷ್ಟವಾಗಿದೆ.  ರೈತ ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ.  ಇಂಥ ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿರುವವರು ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಗ್ರೆಸ್ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.  ಮುಂದಿನ ವಿಧಾನಸಭೆ ಚುನಾವಣೆಗೆ ಈ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದೆ.  ಈ ಜನ ವಿರೋಧಿ ಬಿಜೆಪಿ ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ತೊಲಗಬೇಕು.  ಅಲ್ಲಿಯವರೆಗೂ ಕಾಂಗ್ರೆಸ್ ಕಾರ್ಯಕರ್ತರು ವಿರಮಿಸಬಾರದು ಎಂದು ಅವರು ಹೇಳಿದ್ದಾರೆ.

ಐತಿಹಾಸಿಕ ಗೆಲುವಿಗೆ ಕಾರಣರಾಗಿರುವ ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಂಗಮೇಶ ಬಬಲೇಶ್ವರ ಸಲ್ಲಿಸಿದ್ದಾರೆ.

 

Leave a Reply

ಹೊಸ ಪೋಸ್ಟ್‌