ವಸ್ತುಗಳನ್ನು ಖರೀದಿಸುವಾಗ ವಸ್ತುವಿನ ಮೂಲ ಬೆಲೆಯನ್ನು ಕಡ್ಡಾಯವಾಗಿ ಪರೀಕ್ಷಿಸಿ- ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ಕರೆ

ವಿಜಯಪುರ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಕಡ್ಡಾಯವಾಗಿ ಆ ವಸ್ತುವಿನ ಮೂಲ ಬೆಲೆಯನ್ನು ಕಡ್ಡಾಯವಾಗಿ ಪರೀಕ್ಷಿಸಿ ಖರೀದಿಸಬೇಕು ಎಂದು ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ. ಜಿ. ಕುರವತ್ತಿ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೆ ಎಫ್ ಸಿ ಎಸ್ ಸಿ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 

ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಕಡ್ಡಾಯವಾಗಿ ಆ ವಸ್ತುವಿನ ಮೂಲಬೆಲೆಯ ರಸೀದಿಯನ್ನು ಪಡೆಯಲೇಬೇಕು.  ಇದರಿಂದ ಗ್ರಾಹಕರ ಹಕ್ಕುಗಳನ್ನು ರಕ್ಷಿಸಿದಂತಾಗುತ್ತದೆ ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

 

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗದ ಅಧ್ಯಕ್ಷ ಅಂಬಾದಾಸ ಕುಲಕರ್ಣಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌