ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಸಮೃದ್ಧಿಯಾಗುತ್ತದೆ- ಶ್ರೀ ಸಿದ್ಧೇಶ್ವರ ಸ್ವಾಮೀಜಿ
ವಿಜಯಪುರ: ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಸಮೃದ್ಧಿಯಾಗುತ್ತದೆ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಉಪ್ಪಲದಿನ್ನಿಯಲ್ಲಿ ಉಪ್ಪಲಗಿರಿ ಸಂಗಮನಾಥ ದೇವಸ್ಥಾನದ ಆವರಣದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀಗಳು, ಭೂಮಿತಾಯಿ ನಾವೆಲ್ಲರೂ ಸಂತೋಷದಿಂದ ಇರಲು ಬಾಳೆ, ಕಬ್ಬು, .ಮಾವು, ಲಿಂಬೆ, ಸೇಬು, ದ್ರಾಕ್ಷಿ, ಬಿಳಿಜೋಳ, ಗೋದಿ, ತೊಗರಿ, ಹೆಸರು, ಸಜ್ಜೆ, […]
ಬಸವ ನಾಡಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕಾಕರಣ ಆರಂಭ- ಮೊದಲ ದಿನ ಶೇ. 93.13 ರಷ್ಟು ಸಾಧನೆ- ಡಿಸಿ ಪಿ. ಸುನೀಲ ಕುಮಾರ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 16 ಜನೇವರಿ 2021 ರಿಂದ ಈಗಾಗಲೇ ಕೊರೊನಾ ಲಸಿಕೆಯನ್ನು ನೀಡಲಾಗುತ್ತಿದ್ದು. ಈಗಾಗಲೇ ಶೇ. 100ಕ್ಕೂ ಹೆಚ್ಚು ಗುರಿ ಸಾಧಿಸಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 1634000 ಫಲಾನುಭವಿಗಳಿಗೆ ಕೊರೊನಾ ಲಸಿಕೆ ನೀಡುವ ಗುರಿ ಇತ್ತು. ಆದರೆ, ಈಗಾಗಲೇ ನಿಗದಿತ ಗುರಿ ಮೀರಿ ಲಸಿಕೆಯನ್ನು 1661047 ಫಲಾನುಭವಿಗಳು ನೀಡು ಮೂಲಕ ಶೇ. 100ಕ್ಕಿಂತಲೂ ಹೆಚ್ಚಿನ ಗುರಿ ಸಾಧಿಸಲಾಗಿದೆ. ಅದರಂತೆ 1336713 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, […]
ಕೋವಿಡ್ ಲಸಿಕಾಕರಣದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದ ಸಾಧನೆ- ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಎರಡನೇ ಅತೀ ದೊಡ್ಡ ರಾಷ್ಟ್ರವಾಗಿರುವ ಭಾರತದಲ್ಲಿ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ದಾಖಲೆ ಪ್ರಮಾಣದ ಸಾಧನೆ ಮಾಡುವ ಮೂಲಕ ಕೊರೊನಾ ವಿರುದ್ಧ ದಿಟ್ಟ ಸಮರ ಸಾರಲಾಗಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರ ನಗರದ ಬಾಲಕರ ಸರಕಾರಿ ಪಿಯು ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಪಿಯು ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ […]
ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ರೂ. 1.50 ಲಕ್ಷ ದಂಡ ವಿಧಿಸಿದ ವಿಜಯಪುರ ಪೊಕ್ಸೊ ನ್ಯಾಯಾಲಯ
ವಿಜಯಪುರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪಿಗೆ ವಿಜಯಪುರ ಪೊಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಮತ್ತು ರೂ. 1.50 ಲಕ್ಷ ದಂಡ ವಿಧಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಡನೂರ ಗ್ರಾಮದ ಆರೋಪಿ ಗಣಪತಿ ಭೀಮಾಶಂಕರ ವೀರಶೆಟ್ಟಿ 16.06.2017 ರಂದು 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ತನ್ನ ತೋಟದ ವಸ್ತಿಯಲ್ಲಿ ಸುಮಾರು ಎರಡು ತಿಂಗಳವರೆಗೆ ಇಟ್ಟುಕೊಂಡು ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ವಿಜಯಪುರ ಪೊಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾ […]
ಮಹಿಳಾ ಸಂಕುಲಕ್ಕೆ ಸದಾ ಸ್ಫೂರ್ತಿಯ ಸೆಲೆ ಸಾವಿತ್ರಿಬಾಯಿ ಫುಲೆ- ಸಂಗಮೇಶ ಬಬಲೇಶ್ವರ
ವಿಜಯಪುರ: ದೇಶದ ಮೊದಲ ಶಿಕ್ಷಕಿ ಮಹಿಳಾ ಸಂಕುಲಕ್ಕೆ ಸದಾ ಸ್ಫೂರ್ತಿಯ ಸೆಲೆಯಾಗಿರುವ ಸಾವಿತ್ರಿಬಾಯಿ ಪುಲೆಯವರ ತ್ಯಾಗಮಯ ಮತ್ತು ಆದರ್ಶ ಜೀವನ ದೇಶದ ಮಹಿಳೆಯರಿಗೆ ಸದಾ ಸ್ಫೂರ್ತಿಯ ಸೆಲೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ಎಂ. ಎಸ್. ಬಬಲೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದಲ್ಲಿರುವ ಶ್ರೀ ಶಿವಯ್ಯ ಸ್ವಾಮೀಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆಯವರ ಜನ್ಮದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ […]
ಕೊರೊನಾ ಒಮಿಕ್ರಾನ್: ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ- ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಕೋವಿಡ್ ಮತ್ತು ಒಮಿಕ್ರಾನ್ ವೈರಸ್ ವೇಗವಾಗಿ ದೇಶ ಹಾಗೂ ರಾಜ್ಯಗಳಲ್ಲಿ ಹರಡುತ್ತಿದೆ. ಈ ಬಗ್ಗೆ ತಜ್ಞರೊಂದಿಗೆ ಮಂಗಳವಾರ ಸಂಜೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಈ ಹಿಂದೆ ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ […]
ಜ. 20ರೊಳಗೆ ಸಚಿವ ಸಂಪುಟ ವಿಸ್ತರಣೆ- ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯದ ವಿಶ್ವಾಸವಿದೆ- ಮೇಕೆದಾಟು ವಿಚಾರದಲ್ಲಿ ಕೈ ನಾಯಕರು ಸಿನೇಮಾ ಶೂಟಿಂಗ್ ಗೆ ಹೊರಟಂತಿದೆ- ಯತ್ನಾಳ
ವಿಜಯಪುರ: ಜ. 14 ರ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದೆ. ಈಗಾಗಲೇ ಈ ಕುರಿತು ಹೇಳಿದ್ದೇನೆ. ಜ. 20 ರೊಳಗಾಗಿ ಎಲ್ಲಾ ಜಿಲ್ಲೆಗಳಿಗೂ ಪ್ರಾತಿನಿಧ್ಯ ಕೊಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಚ್ಚು ಕ್ರಿಯಾಶೀಲ ಆಗಿರುವವರನ್ನು ಸಚಿವರನ್ನಾಗಿ ಮಾಡಬೇಕು. ಜ. 8 ಹಾಗೂ 9 ರಂದು ನಡೆಯುವ ಪಕ್ಷದ ಚಿಂತನಾ ಬೈಠಕ್ ನಡೆಯಲಿದೆ. ಅಲ್ಲಿ ಈ […]
15 ರಿಂದ18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ: ಬಸವ ನಾಡಿನಲ್ಲಿ ಉತ್ಸಾಹದಿಂದ ಲಸಿಕೆ ಪಡೆದ ವಿದ್ಯಾರ್ಥಿಗಳು
ವಿಜಯಪುರ: ದೇಶಾದ್ಯಂತ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನ ಆರಂಭವಾಗಿದೆ. ವಿಜಯಪುರ ಜಿಲ್ಲೆಯಲ್ಲಿಯೂ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ವಿಜಯಪುರ ನಗರದ ರವೀಂದ್ರನಾಥ ಠಾಗೋರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ. ಆಧಾರ ಕಾರ್ಡ್ ಹಾಗೂ ಕಾಲೇಜು ಐಡಿ ಕಾರ್ಡ್ ತೋರಿಸಿ ಲಸಿಕೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಸಹ ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ […]
15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ- ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
ಬೆಂಗಳೂರು: 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಬಸವರಾಜ, ಡಾ. ಕೆ. ಸುಧಾಕರ, ಡಾ. ಸಿ. ಎನ್. ಅಶ್ವತ್ಥನಾರಾಯಣ, ವಿ. ಸೋಮಣ್ಣ ಮತ್ತು ಇತರರು ಉಪಸ್ಥಿತರಿದ್ದರು.