ಕೊರೊನಾ ಒಮಿಕ್ರಾನ್: ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಕೋವಿಡ್ ಮತ್ತು ಒಮಿಕ್ರಾನ್ ವೈರಸ್ ವೇಗವಾಗಿ ದೇಶ ಹಾಗೂ ರಾಜ್ಯಗಳಲ್ಲಿ ಹರಡುತ್ತಿದೆ. ಈ ಬಗ್ಗೆ ತಜ್ಞರೊಂದಿಗೆ ಮಂಗಳವಾರ ಸಂಜೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು.  ಈ ಹಿಂದೆ ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ ಆದಷ್ಟೂ ಜನಜೀವನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕರೊನಾ ನಿಯಂತ್ರಣಕ್ಕೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಎಂಬುದರ ಕುರಿತು ಸಲಹೆ ನೀಡುವಂತೆ ತಜ್ಞರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕೊರೊನಾ ಲಸಿಕೆ ಅಭಿಯಾನ 

ಇದೇ ವೇಳೆ, 15-ರಿಂದ 18 ವಯೋಮಾನದವರಿಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಯುವ ಜನರನ್ನು ಸುರಕ್ಷಾ ಚಕ್ರದೊಳಗೆ ತರಬೇಕಿದೆ. ಅದಕ್ಕಾಗಿ ವ್ಯಾಪಕವಾದ ಅಭಿಯಾನವನ್ನು ಕೈಗೊಳ್ಳಲಿದ್ದೇವೆ. ಇದು ಯಶಸ್ವಿಯಾಗಲು , ಪೋಷಕರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರ ಸಮನ್ವಯ ಅಗತ್ಯವಿದೆ ಎಂದರು.

ಜನತೆ ಸ್ವಯಂ ನಿಯಂತ್ರಣ ಹಾಕಿಕೊಂಡು, ಮಾಸ್ಕ್ ಧಾರಣೆ, ಅಂತರ ಕಾಯ್ದುಕೊಳ್ಳುವ  ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಅವರು ವಿನಂತಿ ಮಾಡಿದರು.

ಕಾಂಗ್ರೆಸ್ ಪಾದಯಾತ್ರೆ ವಿಚಾರ 

ಒಮಿಕ್ರಾನ್ ಭೀತಿಯ ನಡುವೆಯೂ ಕಾಂಗ್ರೆಸ್ ಪಾದಯಾತ್ರೆ ಕೈಗೊಳ್ಳುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್ ನಡೆಯನ್ನು ಗಮಸಿಸುತ್ತಿದ್ದು, ಸಾರ್ವತ್ರಿಕ ನಡವಳಿಕೆಯ ಬಗ್ಗೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದರು.

Leave a Reply

ಹೊಸ ಪೋಸ್ಟ್‌