ಬೆಂಗಳೂರು: 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಬಸವರಾಜ, ಡಾ. ಕೆ. ಸುಧಾಕರ, ಡಾ. ಸಿ. ಎನ್. ಅಶ್ವತ್ಥನಾರಾಯಣ, ವಿ. ಸೋಮಣ್ಣ ಮತ್ತು ಇತರರು ಉಪಸ್ಥಿತರಿದ್ದರು.