ಮಹಿಳಾ ಸಂಕುಲಕ್ಕೆ ಸದಾ ಸ್ಫೂರ್ತಿಯ ಸೆಲೆ ಸಾವಿತ್ರಿಬಾಯಿ ಫುಲೆ- ಸಂಗಮೇಶ ಬಬಲೇಶ್ವರ

ವಿಜಯಪುರ: ದೇಶದ ಮೊದಲ ಶಿಕ್ಷಕಿ ಮಹಿಳಾ ಸಂಕುಲಕ್ಕೆ ಸದಾ ಸ್ಫೂರ್ತಿಯ ಸೆಲೆಯಾಗಿರುವ ಸಾವಿತ್ರಿಬಾಯಿ ಪುಲೆಯವರ ತ್ಯಾಗಮಯ ಮತ್ತು ಆದರ್ಶ ಜೀವನ ದೇಶದ ಮಹಿಳೆಯರಿಗೆ ಸದಾ ಸ್ಫೂರ್ತಿಯ ಸೆಲೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ಎಂ. ಎಸ್. ಬಬಲೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದಲ್ಲಿರುವ ಶ್ರೀ ಶಿವಯ್ಯ ಸ್ವಾಮೀಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆಯವರ ಜನ್ಮದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡಳಿತಾಧಿಕಾರಿ ಎಲ್. ಪಿ. ಬಿರಾದಾರ ಮಾತನಾಡಿ, ಇಂದಿನ ಮಕ್ಕಳು ಸಾವಿತ್ರಿಬಾಯಿ ಪುಲೆ ಯವರಂಥ ತ್ಯಾಗ ಮಯ ವ್ಯಕ್ತಿಗಳ ವ್ಯಕ್ತಿತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಲಕ್ಷ್ಮಣ ಸೋಮಕ್ಕನವರ, ಭಾರತಿ ಬೂದಿಹಾಳ, ಲಕ್ಷ್ಮಿ ಬಿರಾದಾರ, ರವಿ ಕೆಂಗನಾಳ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌