15 ರಿಂದ18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ: ಬಸವ ನಾಡಿನಲ್ಲಿ ಉತ್ಸಾಹದಿಂದ ಲಸಿಕೆ ಪಡೆದ ವಿದ್ಯಾರ್ಥಿಗಳು

ವಿಜಯಪುರ: ದೇಶಾದ್ಯಂತ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನ ಆರಂಭವಾಗಿದೆ.

ವಿಜಯಪುರ ಜಿಲ್ಲೆಯಲ್ಲಿಯೂ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ವಿಜಯಪುರ ನಗರದ ರವೀಂದ್ರನಾಥ ಠಾಗೋರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ‌.

 

ಆಧಾರ ಕಾರ್ಡ್ ಹಾಗೂ ಕಾಲೇಜು ಐಡಿ ಕಾರ್ಡ್ ತೋರಿಸಿ ಲಸಿಕೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ‌. ವಿದ್ಯಾರ್ಥಿಗಳು ಸಹ ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ ಎಜ್ಯುಕೇಷನ್ ಸೊಸೈಟಿಯ ಚೇರ್ಮನ್ ಶಿವಾಜಿ ಗಾಯಕವಾಡ ಇವರು ವಿಶೇಷ ಆಸಕ್ತಿ ವಹಿಸಿ ಲಸಿಕೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಒಟ್ಟು 123438 ಮಕ್ಕಳಿಗೆ ಲಸಿಕೆ ನೀಡಲು ಗುರಿ ಹೊಂದಲಾಗಿದೆ. ಸದ್ಯಕ್ಜೆ ಜಿಲ್ಲೆಯಲ್ಲಿ 85170‌ ಲಸಿಕೆ ಸಂಗ್ರಹಿಸಿಡಲಾಗಿದೆ. ಜಿಲ್ಲಾದ್ಯಂತ ಲಸಿಕೆ ನೀಡಲು 173 ಕೇಂದ್ರಗಳನ್ನು ತೆರೆಯಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ‌‌.

Leave a Reply

ಹೊಸ ಪೋಸ್ಟ್‌