ಗ್ರಾಮೀಣ ಪತ್ರಕರ್ತರಿಗಾಗಿ ಆರೋಗ್ಯ ಕಾರ್ಡು, ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ- ಸಿಎಂ ಬಸವರಾಜ ಬೊಮ್ಮಾಯಿ

ಕಲಬುರಗಿ: ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ, ಲೇಖನ, ಅಂಕಣಗಳ ಮೌಲ್ಯ ದೊಡ್ಡದು. ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಲು ಮುಂಬರುವ ಬಜೆಟ್‌‌ ನಲ್ಲಿ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿರುವ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ರಂಗ ಹಲವಾರು ಸವಾಲುಗಳನ್ನು […]

ಪ್ರೊ. ಕವಿತಾ ಕೆ. ರಚಿತ ಎ ಕಾಂಪ್ರಹೆನ್ಸಿವ್ ಮ್ಯಾನ್ಯುಯಲ್ ಆಫ್ ಪೀಡಿಯಾಟ್ರಿಕ್ ನರ್ಸಿಂಗ್ ಪ್ರೊಸೀಜರ್ಸ್ 2ನೇ ಆವೃತ್ತಿ ಪುಸ್ತಕ ಬಿಡುಗಡೆ ಮಾಡಿದ ಡಾ. ರಾಘವೇಂದ್ರ ಕುಲಕರ್ಣಿ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜು ಪ್ರಾಧ್ಯಾಪಕಿ ಕವಿತಾ ಕೆ. ಅವರು ಬರೆದ ಎ ಕಾಂಪ್ರಹೆನ್ಸಿವ್ ಮ್ಯಾನ್ಯುಯಲ್ ಆಫ್ ಪೀಡಿಯಾಟ್ರಿಕ್ ನರ್ಸಿಂಗ್ ಪ್ರೊಸೀಜರ್ಸ್ 2 ನೇ ಆವೃತ್ತಿಯ ಪುಸ್ತಕವನ್ನು ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಕುಲಕರ್ಣಿ ಬಿಡುಗಡೆ ಮಾಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಂಶೋಧನಾ ಕಾರ್ಯದಲ್ಲಿ ತೊಡಗಿದಾಗ ಸೃಜನಶೀಲತೆಯಿಂದ ಪುಸ್ತಕಗಳ ರಚನೆ ಸಾಧ್ಯವಾಗುತ್ತದೆ.  ನಿಮ್ಮಿಂದ ಇನ್ನೂ ಹೆಚ್ಚಿನ ಪುಸ್ತಕ ಬರಲಿ ಎಂದು ಶುಭ ಹಾರೈಸಿದರು. […]

ಕಲಬುರಗಿಯಲ್ಲಿ ರಾಜ್ಯ ಪತ್ರಕರ್ತರ 36ನೇ ಸಮ್ಮೇಳನ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ

ಕಲಬುರಗಿ: ರಾಜ್ಯ ಪತ್ರಕರ್ತರ 36ನೇ ಸಮ್ಮೇಳನ‌ ಕಲಬುರಗಿಯಲ್ಲಿ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಂಸದ ಉಮೇಶ ಜಾಧವ, ವಿಧಾನ ಪರಿಷತ ಮಾಜಿ ಸದಸ್ಯೆ ಹಾಗೂ ಕಲಾವಿದೆ ತಾರಾ ಅನುರಾಧ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಿಎಂ ಸೂಚನೆ ಹಿನ್ನೆಲೆ- ಮಹಾರಾಷ್ಟ್ರದ ಗಡಿ ಚೆಕ್ ಪೋಸ್ಟ್ ಗೆ ಎಸ್ಪಿ ಎಚ್. ಡಿ. ಆನಂದ ಕುಮಾರ ಭೇಟಿ, ಪರಿಶೀಲನೆ

ವಿಜಯಪುರ: ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ. 31 ರಂದು ಸಭೆ ನಡೆಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಹಾರಾಷ್ಟ್ರದ ಗಡಿಯಲ್ಲಿರುವ ಧೂಳಖೇಡ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚೆಕ್‍ಪೋಸ್ಟ್ ನಲ್ಲಿರುವ ವ್ಯವಸ್ಥೆಯ ಬಗ್ಗೆ ಪರಿಶೀಲನೆ […]

ಕೊರೊನಾ 3ನೇ ಅಲೆ ತಡೆಯಲು ಗಡಿಭಾಗಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ 3ನೇ ಅಲೆ ತಡೆಗಟ್ಟಲು ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ.  ಆದಷ್ಟು ಬೇಗನೆ ನಿಗದಿತ ಗುರಿ ತಲುಪಬೇಕು ಎಂದು ಸೂಚನೆ ನೀಡಿದರು. 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತಿರುವ ಲಸಿಕೆಗಳ ಬಗ್ಗೆ ಪೋರ್ಟಲ್‍ನಲ್ಲಿ ಡಾಟಾ ಎಂಟ್ರಿ […]