ವಿಜಯಪುರ: ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ. 31 ರಂದು ಸಭೆ ನಡೆಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಹಾರಾಷ್ಟ್ರದ ಗಡಿಯಲ್ಲಿರುವ ಧೂಳಖೇಡ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಚೆಕ್‍ಪೋಸ್ಟ್ ನಲ್ಲಿರುವ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಲ್ಲಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಅಲ್ಲದೇ, ಹೊರ ರಾಜ್ಯದಿಂದ ವಿಜಯಪುರ ಜಿಲ್ಲೆಗೆ ಅನಧೀಕೃತವಾಗಿ ಪ್ರಯಾಣಿಕರು ಪ್ರವೇಶಿಸದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.