ಎಂ ಎಲ್ ಸಿ ಸುನೀಲಗೌಡ ಪಾಟೀಲ ಬೇಡಿಕೆಗೆ ಸರಕಾರ ಸ್ಪಂದನೆ- ಹೊಸದಾಗಿ 5 ಲಕ್ಷ ಮನೆ ನಿರ್ಮಿಸಲು ಆದೇಶ- ಸರಕಾರಕ್ಕೆ ಶಾಸಕರ ಕೃತಜ್ಞತೆ

ವಿಜಯಪುರ: ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ನಾನಾ ಆಶ್ರಯ ಯೋಜನೆಗಳಡು ಮನೆಗಳ ನಿರ್ಮಾಣ ಕುರಿತು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ರಾಜ್ಯ ಸರಕಾರದ ಗಮನ ಸೆಳೆದಿದ್ದರು.

ಅಲ್ಲದೇ, ಸೂರು ವಂಚಿತರಿಗೆ ಮನೆಗಳ ನಿರ್ಮಾಣದ ಅವಶ್ಯಕತೆ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕನಿಷ್ಠ 50 ಮನೆಗಳನ್ನಾದರೂ ಪ್ರತಿವರ್ಷ ನಿರ್ಮಿಸುವಂತೆ ಅಧಿವೇಶನದಲ್ಲಿಯೂ ಒತ್ತಾಯಿಸಿದ್ದರು.  ಅಲ್ಲದೇ, ವಿಧಾನ ಪರಿಷತ ಚುನಾವಣೆ ಸಂದರ್ಭದಲ್ಲಿಯೂ ಈ ವಿಷಯ ಪ್ರಸ್ತಾಪಿಸಿ ಸರಕಾರ ಗಮನ ಹರಿಸುವಂತೆ ಆಗ್ರಹಿಸಿದ್ದರು.

ಇದೀಗ ರಾಜ್ಯ ಸರಕಾರ ಶಾಸಕರ ಬೇಡಿಕೆಗೆ ಸ್ಪಂದಿಸಿದ್ದು, ರಾಜ್ಯಾದ್ಯಂತ ನಾನಾ ವಸತಿ ಯೋಜನೆಗಳಡಿ 5 ಲಕ್ಷ ಮನೆಗಳನ್ನು ನಿರ್ಮಿಸಲು ನಿರ್ಧರಿಸಿ ಆದೇಶ ಹೊರಡಿಸಿದೆ.  ಸರಕಾರದ ಆದೇಶದಂತೆ ಹೊಸದಾಗಿ 5 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದ.  ಅಲ್ಲದೇ, ಗ್ರಾಮ ಪಂಚಾಯಿತಿಗಳವಾರು ಮನೆಗಳನ್ನು ಹಂಚಿಕೆ ಮಾಡಲಾಗಿದೆ.  ಅದರಂತೆ 25 ಮತ್ತು ಅದಕ್ಕಿಂತಲೂ ಹೆಚ್ಚು ಸದಸ್ಯರಿರುವ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ 50 ಮನೆಗಳು, 15 ಮತ್ತು ಅದಕ್ಕಿಂತಲೂ ಹೆಚ್ಚು ಹಾಗೂ 25ಕ್ಕಿಂತ ಕಡಿಮೆ ಸದಸ್ಯರು ಇರುವ ಗ್ರಾ. ಪಂ. ಗಳಿಗೆ 40 ಹಾಗೂ 15ಕ್ಕಿಂತ ಕಡಿಮೆ ಸದಸ್ಯರಿರುವ ಗ್ರಾ. ಪಂ. ಗಳಿಗೆ ತಲಾ 30 ಮನೆಗಳನ್ನು ಹಂಚಿಕೆ ಮಾಡಿ ಸರಕಾರ ಆದೇಶ ಹೊರಡಿಸಿದೆ.  ಅಲ್ಲದೇ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿಯೂ ಮನೆಗಳನ್ನು ನಿರ್ಮಿಸಲು ನಿರ್ಧರಿಸಿದೆ.

ಸರಕಾರ ಈಗ ಬಸವ ವಸತಿ ಯೋಜನೆ, ಡಾ. ಬಿ. ಆರ್. ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆ, ದೇವರಾಜ ಅರಸು ವಸತಿ ಯೋಜನೆಯಡಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಮಂಜೂರಾತಿ ದೊರೆತಿದೆ.  ನಮ್ಮ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿರುವುದನ್ನು ಸ್ವಾಗತಿಸುತ್ತೇನೆ.  ಅಲ್ಲದೇ, ತಮ್ಮ ಬೇಡಿಕೆಗೆ ಸ್ಪಂದಿಸಿರುವುದಕ್ಕೆ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಮುಂಬರುವ ದಿನಗಳಲ್ಲಿ ಗ್ರಾ. ಪಂ. ಸದಸ್ಯರ ಗೌರವ ಧನ ಹೆಚ್ಚಳ, ಉಚಿತ ಬಸ್ ಪಾಸ್ ಸೌಲಭ್ಯ ಸೇರಿದಂತೆ ಇನ್ನಿತರ ಬೇಡಿಕೆಗಳಿಗಾಗಿ ಮುಂಬರುವ ದಿನಗಳಲ್ಲಿ ಜನಪ್ರತಿನಿಧಿಗಳ ಧ್ವನಿಯಾಗಿ ಸದಾ ಕಾರ್ಯ ನಿರ್ವಹಿಸುವುದಾಗಿ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯರಾದ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

 

Leave a Reply

ಹೊಸ ಪೋಸ್ಟ್‌