ವಿಧಾನ ಪರಿಷತ ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ ಸಮಾರಂಭ- ಸಭಾಪತಿ ಹೊರಟ್ಟಿ, ಸಿಎಂ ಬೊಮ್ಮಾಯಿ ಉಪಸ್ಥಿತಿ

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದ ವಿಧಾನ ಪರಿಷತ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ನೂತನವಾಗಿ ಆಯ್ಕೆಯಾದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.  ಕಾರ್ಯಕ್ರಮದ ನಂತರ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನೂತನ ಸದಸ್ಯರು ಗ್ರುಪ್ ಫೋಟೋ ತೆಗೆಸಿಕೊಂಡರು.

Leave a Reply

ಹೊಸ ಪೋಸ್ಟ್‌