ಸಿಎಂ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ- ಯಾಕೆ ಗೊತ್ತಾ?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಂ. 4.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಫೋನ್ ಕರೆ ಮಾಡಿ ಮಾತನಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮಗೆ ಕರೆ ಮಾಡಿದ ಪ್ರಧಾನಿಗೆ ಕೃತಜ್ಞತೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು ಐದು ನಿಮಿಷಗಳ ಕಾಲ ನಡೆದ ಮಾತುಕತೆ ನಡೆಸಿದ್ದಾರೆ. ಸಿಎಂಗೆ ಕೊರೊನಾ ಸೋಂಕು ತಗುಲಿರುವುದು ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಅಲ್ಲದೇ, […]
ಶರಣರ, ಸಂತರ ಕಾಯಕ, ದಾಸೋಹಗಳು ಜನಸಾಮಾನ್ಯರ ಬದುಕನ್ನು ಮೇಲಕ್ಕೆತ್ತಲು ಪ್ರಬಲ ಸಾಧನಗಳಾಗಿವೆ- ಡಾ. ಬಿ. ಜಿ. ಮೂಲಿಮನಿ
ವಿಜಯಪುರ: ಶರಣರ, ಸಂತರ ಕಾಯಕ ಹಾಗೂ ದಾಸೋಹಗಳು ಜನಸಾಮಾನ್ಯರ ಬದುಕನ್ನು ಮೇಲೆಕ್ಕೆತ್ತಲು ಎರಡು ಪ್ರಬಲ ಸಾಧನಗಳಾಗಿವೆ ಎಂದು ಗುಲಬುರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಬಿ. ಜಿ. ಮೂಲಿಮನಿ ತಿಳಿಸಿದರು. ವಿಜಯಪುರ ನಗರದಲ್ಲಿ ಸಿಕ್ಯಾಬ್ ಸಂಸ್ಥೆಯ ಸಂಸ್ಥಾಪಕರ ದಿನಾಚಾರಣೆಯಲ್ಲಿ ಸಿಕ್ಯಾಬ್ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳ ಜ್ಞಾನದಾಸೋಹ ಕೈಂಕರ್ಯವು ಬಡ, ಆರ್ಥಿಕ ದುರ್ಬಲ ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆ, ಆತ್ಮಗೌರವಗಳನ್ನು ದೊರಕಿಸಿ ಒಟ್ಟಾರೆ ದೇಶದ ಅಭಿವೃದ್ದಿಗೆ ಕಾರಣವಾಗುತ್ತದೆ. ಇಂದು ನಾವು ಜ್ಞಾನಾದರಿತ ಆರ್ಥಿಕ ವ್ಯವಸ್ಥೆಯಲ್ಲಿ […]
ಮಕ್ಕಳಲ್ಲಿ ಹೆಚ್ಚುತ್ತಿರುವ ಕೊರೊನಾ: ಶಾಲೆಯಲ್ಲಿ ರೆಡ್ ಡೆ ಯನ್ನು ಜಾಗೃತಿ ರೂಪದಲ್ಲಿ ಆಚರಿಸಿದ ರವೀಂದ್ರನಾಥ ಠಾಗೋರ ಶಾಲೆಯ ಮಕ್ಕಳು
ವಿಜಯಪುರ: ಮಕ್ಕಳಲ್ಲಿ ಈಗ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಕೊರೊನಾ ಮತ್ತು ಅದರಲ್ಲೂ ಒಮಿಕ್ರಾನ್ ಸೋಂಕು ಈಗ ಶರವೇಗದಲ್ಲಿ ಹೆಚ್ಚಾಗುತ್ತಿದೆ. ಕೋವಿಡ್- 19 3ನೇ ಅಲೆ ಈಗ ವ್ಯಾಪಕವಾಗಿ ಪರಿಣಾಮ ಬೀರುತ್ತಿದ್ದು, ಮಕ್ಕಳನ್ನೂ ಕೂಡ ಬಾಧಿಸುತ್ತಿದೆ. ಈಗಾಗಲೇ ರಾಜ್ಯದಲ್ಲಿ ನೂರಾರು ಮಕ್ಕಳು ಕೊರೊನಾ ಸೋಂಕಿನಿಂದ ಬಾಧಿತರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಸರಕಾರಿ ಮತ್ತು ಖಾಸಗಿ ಶಾಲೆಗಳ ಪೂರ್ವ ಪ್ರಾಥಮಿಕದಿಂದ ಹಿಡಿದು ಸ್ನಾತಕೋತ್ತರ ಪದವಿ ವರೆಗೂ ತರಗತಿಗಳು ನಡೆಯುತ್ತಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಮಕ್ಕಳಲ್ಲಿ ಕೊರೊನಾ ಸೋಂಕು […]
ನಾಲತವಾಡದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಕಾರ್ಯ 25 ವರ್ಷಗಳಿಂದ ನಡೆಯುತ್ತಿರುವ ಕೈಂಕರ್ಯ
ವಿಜಯಪುರ: ವಿಜಯಪುರ ಜಿಲ್ಲೆಯ ನಾಲತವಾಡ ಪಟ್ಟಣದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಕಾರ್ಯ ನಡೆಯಿತು. ಸತತವಾಗಿ 25 ವರ್ಷಗಳಿಂದ ಇಲ್ಲಿನ ಯುವಕರು ಅಯ್ಯಪ್ಪ ಸ್ವಾಮಿ ಮಾಲೆಯನ್ನು ಧರಿಸುತ್ತಿದ್ದಾರೆ. ನಾಲತವಾಡ ಪಟ್ಟಣದಲ್ಲಿ 32 ಜನ ಅಯ್ಯಪ್ಪ ಮಾಲೆ ಹಾಕಿಕೊಂಡಿದ್ದಾರೆ. ಈ ಕಾರ್ಯಕ್ರಮದ ಅಂಗವಾಗಿ ಶ್ರೀ ವೀರೇಶ್ವರ ಮಠದಲ್ಲಿ ಹಿರುಮುಡಿ ಕಟ್ಟಿದರು. ನಂತರ ಮಠದಿಂದ ಎಲ್ಲರೂ ಶಬರಿಯ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದರು.
ಸಚಿವ ಗೋವಿಂದ ಕಾರಜೋಳ ದಲಿತ ಕಾರ್ಡ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ- ವಿಜಯಪುರ ಕಾಂಗ್ರೆಸ್ ಮುಖಂಡ ಆರೋಪ
ವಿಜಯಪುರ: ಮೇಕೆದಾಟು ಪಾದಯಾತ್ರೆ ವಿಚಾರ ಈಗ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಮಾಜಿ ಸಚಿವ ಎಂ. ಬಿ. ಪಾಟೀಲ ನಿವಾಸದ ಎದುರು ನಡೆದ ಪ್ರತಿಭಟನೆ ಹಾಗೂ ಆರೋಪಗಳ ಕುರಿತು ವಿಜಯಪುರ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಮೇಕೆದಾಟು ವಿಚಾರದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ತಮ್ಮ ಇತಿಮಿತಿ ಬಿಟ್ಟು. ಟೀಕೆಗಳನ್ನು ಸ್ವೀಕರಿಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು […]