ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ- ರಾಷ್ಟ್ರೀಯ ಸರಾಸರಿಗಿಂತ ರಾಜ್ಯದಲ್ಲಿ ಹೆಚ್ಚಿಗೆ ಕೊರೊನಾ ಲಸಿಕೆ ಕ್ರಮಕ್ಕೆ ಪ್ರಧಾನಿ ಮೆಚ್ಚುಗೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಸಿಎಂ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿಯವರಿಗೆ ವಿವರಿಸಲಾಯಿತು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ […]
ವಿಶ್ವದಲ್ಲಿ ಜ್ಞಾನವೇ ಎಲ್ಲಕ್ಕಿಂತ ಮಿಗಿಲು- ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ
ವಿಜಯಪುರ: ವಿಶ್ವದಲ್ಲಿ ಜ್ಞಾನ ಎಲ್ಲಕ್ಕಿಂತಲೂ ಮಿಗಿಲಾಗಿದೆ. ಜ್ಞಾನ ಜೋಳಿಗೆಯ ಮೂಲಕ ಪುಸ್ತಕಗಳನ್ನು ಸಂಗ್ರಹಿಸಿ ಸರಕಾರಿ ಶಾಲೆಗಳ ಗ್ರಂಥಾಲಯಗಳಿಗೆ ನೀಡುತ್ತಿರುವುದು ನಿಜಕ್ಕೂ ಅಭಿಮಾನದ ಸಂಗತಿ ಎಂದು ನರ್ಮದಾ ಬಚಾವೋ ಆಂದೋಲನದ ರೂವಾರಿ ಮತ್ತು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಸಿ ಎನ್ ಎಫ್ ಇ ಸಂಸ್ಥೆಯಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಸಮಾಜ ಸೇವಕ ಸಂಗಮೇಶ ಬಬಲೇಶ್ವರ ಕೈಗೊಂಡಿರುವ ಜ್ಞಾನ ಜೋಳಿಗೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ತಮ್ಮ ಬಳಿಯಿದ್ದ ಪುಸ್ತಕವನ್ನು ಜ್ಞಾನ ಜೋಳಿಗೆಗೆ […]
ಮಾಜಿ ಸಚಿವ ಎಂ. ಬಿ. ಪಾಟೀಲ, ಅವರ ಕುಟುಂಬಕ್ಜೆ ಹೆಚ್ಚಿನ ಭದ್ರತೆ ಒದಗಿಸಲು ಆಗ್ರಹ: ಎಎಸ್ಪಿಗೆ ಮನವಿ ಪತ್ರ ಸಲ್ಲಿಕೆ
ವಿಜಯಪುರ: ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ, ಅವರ ಕುಟುಂಬ ಸದಸ್ಯರು ಮತ್ತು ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸುವಂತೆ ಆಗ್ರಹಿಸಿ ನಾನಾ ಸಂಘಟನೆಗಳ ಮುಖಂಡರು ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ವಿಜಯಪುರದಲ್ಲಿ ಎಸ್ಪಿ ಕಚೇರಿಗೆ ತೆರಳಿದ ನಾನಾ ಸಂಘಟನೆಗಳ ಮುಖಂಡರು, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ದಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ನಾನಾ ಮುಖಂಡರು, ಎಂ.ಬಿ.ಪಾಟೀಲ ಅವರು ಜನನಾಯಕರಾಗಿದ್ದು, ನಮ್ಮ […]
ಮೇಕೆದಾಟು ವಿಚಾರ: ಮಾಜಿ ಸಚಿವ ಎಂ. ಬಿ. ಪಾಟೀಲ ನಿವಾಸದ ಬಳಿ ನಾನಾ ದಲಿತ ಸಂಘಟನೆಗಳ ಪ್ರತಿಭಟನೆ
ವಿಜಯಪುರ: ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ನೀರಾವರಿ ಸಚಿವ ಗೋವಿಂದ ಜಾರಜೋಳ ಬಗ್ಗೆ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಾನಾ ದಲಿತ ಪರ ಸಂಘಟನೆಗಳು ವಿಜಯಪುರದಲ್ಲಿ ಎಂ. ಬಿ. ಪಾಟೀಲ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿವೆ. ಕೈಗೆ ಕಪ್ಪು ಬಟ್ಟಿ ಕಟ್ಟಿಕೊಂಡ ನಾನಾ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ವಿಜಯಪುರ ನಗರದ ಬಂಜಾರ ಕ್ರಾಸ್ ಬಳಿ ವಿಜಯಪುರ- ಸೊಲ್ಲಾಪುರ ರಸ್ತೆ ಬಂದ್ ಮಾಡಿ ಆಕ್ರೋಶ ಹೊರ ಹಾಕಿದರು. […]