ಜನಸಂದಣಿ ತಡೆಯಲು ಡಿಸಿಯಿಂದ ನಿಷೇಧಾಜ್ಞೆ- ಪ್ರವಾಸಿ ತಾಣ ಆಲಮಟ್ಟಿ ಟೂರಿಸ್ಟಗಳಿಲ್ಲದೇ ಭಣ ಭಣ
ವಿಜಯಪುರ: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕಲಂ 144ರ ಅಡಿ ನಿಷೇಧಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ನಿಡಗುಂದಿ ತಾಲೂಕಿನ ಆಮಲಟ್ಟಿ ಪ್ರವಾಸಿಗರಿಲ್ಲದೆ ಭಣಗುಡುತ್ತಿದೆ. ಪೊಲೀಸರೂ ಕೂಡ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರಿಂದ ಸರಕಾರಿ ರಜೆ ದಿನ, ವಾರಾಂತ್ಯಕ್ಕೆ ಹೆಚ್ಚು ಪ್ರವಾಸಿಗರು ಬರುತ್ತಿದ್ದ ಆಲಮಟ್ಟಿಯಲ್ಲಿ ಪ್ರವಾಸಿಗರಿಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸಂಕ್ರಮಣದ ಅಂಗವಾಗಿ ಸಹಸ್ರಾರು ಜನರು ಇಲ್ಲಿಗೆ ಆಗಮಿಸಿ ಕೃಷ್ಣಾ ನದಿಯಲ್ಲಿ ಪವಿತ್ರ ಸ್ನಾನವೂ […]
ವಿಜಯಪುರ ಜಿಲ್ಲೆಯಲ್ಲಿ ಕೇವಲ 13 ದಿನಗಳಲ್ಲಿ 131 ಮಕ್ಕಳಲ್ಲಿ ಕೊರೊನಾ ಸೋಂಕು ದೃಢ
ವಿಜಯಪುರ: ಬಸವ ನಾಡಿನಲ್ಲಿ ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಕೇವಲ 13 ದಿನಗಳಲ್ಲಿ 131 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಜನೇವರಿ 1 ರಿಂದ ಜನೇವರಿ 13ರ ವರೆಗೆ ಒಟ್ಟು 131 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಈ ಮಕ್ಕಳಲ್ಲಿ 11 ರಿಂದ 18 ವರ್ಷದ ಮಕ್ಕಳಲ್ಲಿಯೇ ಕೊರೊನಾ ಸೋಂಕು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಒಂದು ವರ್ಷದೊಳಗಿನ ಮಕ್ಕಳಲ್ಲಿ ಯಾರಿಗೂ […]
ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ಅಗತ್ಯವಿದೆ- ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕ್ರೀಡಾಪಟುಳುಗಳಿಗೆ ವೈಜ್ಞಾನಿಕ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತಿ ಪಡೆದಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಆನಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡಿದರು. ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯವಾಗಿದೆ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಸಿಎಂ ಅಭಿಪ್ರಾಯಪಟ್ಟ ಅವರು, ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು […]
ವಿಜಯಪುರ ಜಿಲ್ಲೆಯಲ್ಲಿ ಒಂದೇ ದಿನ 107 ಜನರಲ್ಲಿ ಕೊರೊನಾ ಸೋಂಕು ಪತ್ತೆ- ಪಾಸಿಟಿವಿಟಿ ದರವೂ ಏರಿಕೆ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಒಂದೇ ದಿನ 107 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದು ಈಗಷ್ಟೇ ಸಹಜ ಸ್ಥಿತಿಗೆ ಮರಳುತ್ತಿರುವ ಬಸವ ನಾಡಿನ ಜನರಲ್ಲಿ ಆತಂಕ ಮೂಡಸಿದೆ. ಇದರಲ್ಲಿ ವಿಜಯಪುರ ನಗರವೊಂದರಲ್ಲಿಯೇ 60 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿಜಯಪುರ ಗ್ರಾಮೀಣ ಭಾಗದಲ್ಲಿ 4, ಬಬಲೇಶ್ವರ ತಾಲೂಕಿನಲ್ಲಿ 1, ಬಸವನ ಬಾಗೇವಾಡಿ ತಾಲೂಕಿನಲ್ಲಿ 6, ಕೊಲ್ಹಾರ ತಾಲೂಕಿನಲ್ಲಿ 5, ನಿಡಗುಂದಿ ತಾಲೂಕಿನಲ್ಲಿ 1, ಇಂಡಿ ತಾಲೂಕಿನಲ್ಲಿ 5, ಚಡಚಣ ತಾಲೂಕಿನಲ್ಲಿ 1 ಮತ್ತು ಮುದ್ದೇಬಿಹಾಳ […]