ಎರಡು ವಾರ ಅನಗತ್ಯವಾಗಿ ಆಸ್ಪತ್ರೆಗಳಿಗೆ ತೆರಳಬೇಡಿ- ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕೋರೋನಾ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸದಾಗಿ ಸೂಚನೆ ನೀಡಿದೆ. ಅಸ್ವಸ್ಥ ಮತ್ತು ತುರ್ತು ಆರೋಗ್ಯ ಸೇವೆ ಅಗತ್ಯ ಇರುವ ರೋಗಿಗಳು ಮಾತ್ರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಲಘು ಅನಾರೋಗ್ಯದ ಲಕ್ಷಣಗಳಿರುವವರು ಮತ್ತು ದಂತ ಸಂಬಂದಿ ಚಿಕಿತ್ಸೆ ರೋಗಿಗಳು ಎರಡು ವಾರ ಆಸ್ಪತ್ರೆಗಳಿಗೆ ತೆರಳಬಾರದು.  ಎರಡು ವಾರಗಳ ಕಾಲ ಅತವಾ ಮುಂದಿನ ಆದೇಶದವರೆಗೆ ಇದನ್ನು ಅನುಸರಿಸಬೇಕು ಎಂದು ಹೇಳಿದೆ. ಖಾಸಗಿ ಆಸ್ಪತ್ರೆಗಳು ಕೂಡ ಈ ಮಾರ್ಗಸೂಚಿ ಪಾಲಿಸಬೇಕು.  ಸಧ್ಯದ […]

ಸಿದ್ದೇಶ್ವರ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿ ಹಜರತ್ ಮುರ್ತುಜಾ ಖಾದ್ರಿ ದರ್ಗಾದಲ್ಲಿ ಯಾಸೀನ ಜವಳಿ ಮತ್ತೀತತರಿಂದ ವಿಶೇಷ ಪ್ರಾರ್ಥನೆ

ವಿಜಯಪುರ: ನಡೆದಾಡುವ ದೇವರೆಂದೇ ಹೆಸರಾಗಿರುವ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಯಾಸೀನ ಜವಳಿ ಮತ್ತು ಇತರರು ವಿಜಯಪುರ ನಗರದ ಹಜರತ್ ಮುರ್ತುಜಾ ಖಾದ್ರಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಾಸೀನ ಜವಳಿ, ನಡೆದಾಡುವ ದೇವರಾದ ಶ್ರೀ ಸಿದ್ಧೇಶ್ವರ ಶ್ರೀಗಳು ಬೇಗನೇ ಗುಣಮುಖರಾಗಲಿ.  ಸಿದ್ದೇಶ್ವರ ಶ್ರೀಗಳ ಆಧ್ಯಾತ್ಮಿದ ಕುಡುಗೆ ನಿರಂತವರವಾಗಿರಲಿ.  ಪ್ರವಚನಗಳ ಮೂಲಕ ಅವರು ನಾಡಿನ ಜನತೆಗೆ ನೀಡುತ್ತಿರುವ ಸಂದೇಶಗಳು ಮುಂದುರವರೆಯಬೇಕು.  ಈ […]

ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ 77 ಜನರಲ್ಲಿ ಕೊರೊನಾ ಸೋಂಕು ಪತ್ತೆ- ಪಾಸಿಟಿವಿಟಿ ದರ ಸ್ವಲ್ಪ ಇಳಿಕೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಹೊಸಗಾಗಿ 77 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ಶುಕ್ರವಾರ ಒಂದೇ ದಿನ 107 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು.  ಇದರಲ್ಲಿ ವಿಜಯಪುರ ನಗರವೊಂದರಲ್ಲಿಯೇ 27 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿಜಯಪುರ ಗ್ರಾಮೀಣ ಭಾಗದಲ್ಲಿ 2, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ತಲಾ 1, ಬಸವನ ಬಾಗೇವಾಡಿ ತಾಲೂಕಿನಲ್ಲಿ 9, ಕೊಲ್ಹಾರ ತಾಲೂಕಿನಲ್ಲಿ 13, ಇಂಡಿ ತಾಲೂಕಿನಲ್ಲಿ 3, ಮುದ್ದೇಬಿಹಾಳ ತಾಲೂಕಿನಲ್ಲಿ 12, ತಾಳಿಕೋಟೆ ತಾಲೂಕಿನಲ್ಲಿ 4, ಸಿಂದಗಿ ತಾಲೂಕಿನಲ್ಲಿ 3, ದೇವರ […]

ಪ್ರತಿಯೊಂದು ಆಂದೋಲನ ಸಂಘರ್ಷದಿಂದ ಉಂಟಾಗಿರುತ್ತವೆ- ಮೇಧಾ ಪಾಟ್ಕರ್

ವಿಜಯಪುರ: 22ನೇ ಶತಮಾನ ಆರಂಭವಾದರೂ ಇನ್ನೂ ಅನೇಕ ಮಹಿಳೆಯರು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದಿಂದ ವಂಚಿತರಾಗಿದ್ದಾರೆ,  ನಾಲ್ಕು ಗೊಡೆಗಳ ಮದ್ಯದಲ್ಲಿಯೇ ಜೀವನ ನಡೆಸುತ್ತಿರುವವರಿಗೆ ವಿಶೇಷ ಕಾಳಜಿ ವಹಿಸಿ ಉತ್ತಮ ಶಿಕ್ಷಣ ನೀಡಿದಾಗ ಅವರೂ ಕೂಡ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದ್ದಾರೆ. ವಿಜಯಪುರದಲ್ಲಿ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕಾದ ಅವಶ್ಯಕತೆಯಿದೆ.  […]

ಬಸವ ನಾಡಿನಲ್ಲಿ ವೀಕೆಂಡ್ ಕರ್ಫ್ಯೂಗೆ ಜನರಿಂದ ಉತ್ತಮ ಸ್ಪಂದನೆ

ವಿಜಯಪುರ: ಕೊರೊನಾ ಒಮಿಕ್ರಾನ್ ಸೋಂಕು ದಿನೇ ದಿನೇ ತನ್ನ ಪ್ರಭಾವವನ್ನು ಹೆಚ್ಚಿಸುತ್ತಿದ್ದು, ಸೋಂಕಿತರ ಸಂಖ್ಯೆಯೂ ಭಾರಿ ಸಂಖ್ಯೆಯಲ್ಲಿ ಏರುತ್ತಲೇ ಸಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೋಂಕು ತಡೆಗಟ್ಟಲು ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂಗೆ ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಬಹುತೇಕ ಏಳೆಂಟು ತಿಂಗಳ ಬಳಿಕ ಸೋಂಕಿತರ ಸಂಖ್ಯೆ ಶತಕ ದಾಟಿದೆ.  ಶುಕ್ರವಾರ 107 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.  ಅಲ್ಲದೇ, ಪಾಸಿಟಿವಿಟಿ […]

2ಎ ಮೀಸಲಾತಿ ನೀಡಲು ವಿಳಂಬ- ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಪ್ರತಿಭಟನೆ

ವಿಜಯಪುರ: ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಪ್ರತಿಟನೆ ನಡೆಸಲಾಯಿತು.  ಬಸವನ ಬಾಗೇವಾಡಿ ಪಟ್ಟಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭೆ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಂಕರಗೌಡ ಬಿರಾದಾರ, 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ […]