ಜೆಸಿಬಿ ಕಳ್ಳರನ್ನು ಬಂಧಿಸಿದ ವಿಜಯಪುರ ಗ್ರಾಮೀಣ ಪೊಲೀಸರು

ವಿಜಯಪುರ: ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾ. ಪಂ. ಆವರಣದಿಂದ ಕಳುವ ಮಾಡಿದ್ದ ಕಳ್ಳರನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಜೆಸಿಬಿ ವಶಪಡಿಸಿಕೊಂಡಿದ್ದಾರೆ. ಜ. 12 ರಂದು ರಾ. 8 ರಿಂದ 12ರ ನಡುವಿನ ಅವಧಿಯಲ್ಲಿ ಕೆಎ-28/ಝೆಡ್-5907 ಸಂಖ್ಯೆ ಮತ್ತು ಸುಮಾರು ರೂ. 25 ಲಕ್ಷ ಮೌಲ್ಯದ ಜೆಸಿಬಿಯನ್ನು ಕಳವು ಮಾಡಲಾಗಿತ್ತು.  ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಅವರು ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಮತ್ತು ವಿಜಯಪುರ ಡಿವೈಎಸ್ಪಿ […]

ಈ ವಾರ ವೀಕೆಂಡ್ ಕರ್ಫ್ಯೂ ಇಲ್ಲ- ಆಮೇಲೆ ಮುಂದಿನ ನಿರ್ಧಾರ

ಬೆಂಗಳೂರು: ಈ ವಾರ ವೀಕೆಂಡ್ ಕರ್ಫ್ಯೂ ಇಲ್ಲ.  ಮುಂದಿನ ವಾರದ ಬಗ್ಗೆ ನಂತರ ನಿರ್ಧರಿಸಲು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ  ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು‌ ಪರಿಶೀಲನೆ ಸಭೆ ನಡೆಯಿತು. ಈ ಸಭೆಯಲ್ಲಿ      ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾ.10 ರಿಂದ ಬೆ. 5ರ ವರೆಗೆ ಮುಂದುವರೆಸಲು ನಿರ್ಧರಿಸಲಾಯಿತು.‌  ಅಲ್ಲದೇ, ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು […]

ಇಬ್ಬರು ಕಳ್ಳರನ್ನು ಬಂಧಿಸಿದ ಗಾಂಧಿಚೌಕ ಪೊಲೀಸರು- ಚಿನ್ನಾಭರಣ, ಮೋಟಾರ ಸೈಕಲ್ ವಶ

ವಿಜಯಪುರ: ವಿಜಯಪುರ ನಗರದಲ್ಲಿ ಇತ್ತೀಚೆಗೆ ನಡೆದ ನಾನಾ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಗಾಂಧಿಚೌಕ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಮೂರು ಬೈಕ್ ವಶಪಡಿಸಿಕೊಂಡಿದ್ದಾರೆ.  ಮನೆಗಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಅವರು ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಲಕ್ಷ್ಮಿನಾರಾಯಣ , ಸಿಪಿಐ ರವೀಂದ್ರ ನಾಯ್ಕೋಡಿ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದರು.  ಈ ತಂಡ ಮನೆಗಳ್ಳತನ ಮತ್ತು […]

ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಮಹಾಸ್ಪೋಟ- ಒಂದೇ ದಿನ 474 ಜನರಲ್ಲಿ ಸೋಂಕು ದೃಢ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ನಗರದಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಜಿಲ್ಲೆಯಲ್ಲಿಯೂ ಭಾರಿ ಸಂಖ್ಯೆಯಲ್ಲಿ ಸೋಂಕು ತಗುಲಿದೆ.  ಒಂದೇ ದಿನ 474 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ಇದು ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಸೃಷ್ಠಿಸಿದೆ. ವಿಜಯಪುರ ನಗರವೊಂದರಲ್ಲಿಯೇ 180 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ವಿಜಯಪುರ ಗ್ರಾಮೀಣ ಭಾಗದಲ್ಲಿ 16, ಬಬಲೇಶ್ವರ ತಾಲೂಕಿನಲ್ಲಿ 16, ತಿಕೋಟಾ ತಾಲೂಕಿನಲ್ಲಿ 8, ಬಸವನ ಬಾಗೇವಾಡಿ ತಾಲೂಕಿನಲ್ಲಿ 40, ಕೊಲ್ಹಾರ ತಾಲೂಕಿನಲ್ಲಿ 5, ನಿಡಗುಂದಿ ತಾಲೂಕಿನಲ್ಲಿ 10, ಇಂಡಿ ತಾಲೂಕಿನಲ್ಲಿ 45, ಚಡಚಣ […]

ಕಾರಜೋಳರಿಂದ ಸಿರಸಂಗಿ ಲಿಂಗರಾಜರ ವಂಶಸ್ಥರ ಅವಮಾನ- ಸಾಮರ್ಥ್ಯವಿದ್ದರೆ ಸಾಮಾನ್ಯ ಕ್ಷೇತ್ರದಿಂದ ಗೆದ್ದು ತೋರಿಸಲಿ- ಸಂಗಮೇಶ ಬಬಲೇಶ್ವರ

ವಿಜಯಪುರ: ಬಿಜೆಪಿ ಮುಖಂಡ ಉಮೇಶ ಕೋಳಕೂರ ಮೂಲಕ ಸಚಿವ ಗೋವಿಂದ ಕಾರಜೋಳ ಅಖಿಲ ಭಾರತ ವೀರಶೈವ ಮಹಾಸಭೆ ಕಟ್ಟಲು ಕಾರಣರಾದ ಮಹಾದಾನಿ ಸಿರಸಂಗಿ ಲಿಂಗರಾಜರ ವಂಶಸ್ಥರನ್ನು ಅವಮಾನಿಸಿದ್ದಾರೆ ಎಂದು ಪಂಚಮಸಾಲಿ ಸಮುದಾಯದ ರಾಷ್ಚ್ರೀಯ ವಕ್ತಾರ ಮತ್ತು ಕೆಪಿಸಿಸಿ ಸದಸ್ಯ ಹಾಗೂ ಸಮಾಜ ಸೇವಕ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ತಮ್ಮ ಹಿಂಬಾಲಕರ ಮೂಲಕ ಎಂ. ಬಿ. ಪಾಟೀಲ ಅವರು ಲಿಂಗಾಯತ ನಾಯಕರಲ್ಲ.  ಸರಕಾರದ ಜಾತಿ ಪಟ್ಟಿಯಲ್ಲಿ ಅವರ […]

ವಿಜಯಪುರದಲ್ಲಿರುವ ಮಹಿಳಾ ವಿವಿಗೆ ಒಂದು ವಾರ ರಜೆ- ಯಾಕೆ ಗೊತ್ತಾ?

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಒಂದು ವಾರ ರಜೆ ನೀಡಲಾಗಿದೆ. ಜನೇವರಿ 27ರ ವರೆಗೆ ಮಹಿಳಾ ವಿಶ್ವವಿದ್ಯಾಲಯಕ್ಕೆ ರಜೆ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವುದೇ ಒಂದು ಶಾಲೆ, ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಐದಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದರೆ ಒಂದು ವಾರ ರಜೆ ನೀಡುವಂತೆ ಸರಕಾರದ ಮಾರ್ಗಸೂಚಿ ಅನ್ವಯ ವಿಜಯಪುರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು. ಈಗ ಮಹಿಳಾ ವಿಶ್ವವಿದ್ಯಾಲಯದಲ್ಲಿ ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.  ಅಲ್ಲದೇ, ಕೊರೊನಾ […]

ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಡಿಸಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಮತ್ತು ಇನ್ನಷ್ಟು ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ನಾನಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ ಅವರು, ಅಧಿಕಾರಿಗಳು ತಮ್ಮ ನಿತ್ಯದ ಕಚೇರಿ ಕೆಲಸ ಕಾರ್ಯಗಳೊಂದಿಗೆ ಕೋವಿಡ್ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು ಎಂದು […]