ಈ ವಾರ ವೀಕೆಂಡ್ ಕರ್ಫ್ಯೂ ಇಲ್ಲ- ಆಮೇಲೆ ಮುಂದಿನ ನಿರ್ಧಾರ

ಬೆಂಗಳೂರು: ಈ ವಾರ ವೀಕೆಂಡ್ ಕರ್ಫ್ಯೂ ಇಲ್ಲ.  ಮುಂದಿನ ವಾರದ ಬಗ್ಗೆ ನಂತರ ನಿರ್ಧರಿಸಲು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ  ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು‌ ಪರಿಶೀಲನೆ ಸಭೆ ನಡೆಯಿತು.

ಈ ಸಭೆಯಲ್ಲಿ      ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾ.10 ರಿಂದ ಬೆ. 5ರ ವರೆಗೆ ಮುಂದುವರೆಸಲು ನಿರ್ಧರಿಸಲಾಯಿತು.‌  ಅಲ್ಲದೇ, ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ಸದ್ಯಕ್ಕೆ ಹಿಂಪಡೆಯಲು    ನಿರ್ಧರಿಸಲಾಯಿತು.  ಆದರೆ ಮುಂದಿನ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು.  ಆದ್ದರಿಂದ ಸಾರ್ವಜನಿಕಕರು ಜವಾಬ್ದಾರಿಯುತವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಿ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತೀ ಅಗತ್ಯವಾಗಿದೆ ಎಂದು ಸಭೆಯಲ್ಲಿ ತಜ್ಞರು ಮತ್ತು ಸಚಿವರು ಹಾಗೂ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.  ಮಾಲ್, ಹೋಟೆಲ್, ಬಾರ್, ಕ್ಲಬ್,ಪಬ್ ಗಳು ಶೇ. 50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಅವಕಾಶ ನೀಡುವುದು.  ಸಾರ್ವಜನಿಕರುಬಎರಡೂ ಲಸಿಕೆ ಪಡೆಯುವುದು ಕಡ್ಡಾಯ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳು

ಜ. 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 293231 ಸಕ್ರಿಯ ಪ್ರಕರಣಗಳು ಇವೆ.  ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ.  ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯುನಲ್ಲಿದ್ದಾರೆ.  127 ಮಂದಿ ವೆಂಟಿಲೇಟರ್ ನಲ್ಲಿ ಇದ್ದಾರೆ.  ಬೆಂಗಳೂರನ್ನು ಹೊರತು ಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ      ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು   ವರದಿಯಾಗಿವೆ.  ಪಾಸಿಟಿವಿ ದರ ಶೇ. 19.94 ರಷ್ಟಿದೆ.  ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ. 16.57 ರಷ್ಟಿದೆ.  ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.  ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್ಎ ಪ್ಲಾಂಟ್ ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.  ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ ಎ ಪ್ಲಾಂಟ್ ಗಳು ಕಾರ್ಯಾರಂಭ ಮಾಡಿವೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

ಅಲ್ಲದೇ, ಸರಾಸರಿ ಮೂರು ದಿನಕ್ಕೆ ಸೋಂಕು ದ್ವಿಗುಣಗೊಳ್ಳುತ್ತಿದೆ.  ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.  ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.  ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.  ವಾರಾಂತ್ಯ ಕರ್ಫ್ಯೂ ವಿಧಿಸಿದರೂ ಕೂಡ ದೊಡ್ಡ ಪರಿಣಾಮ ಉಂಟಾಗಿಲ್ಲ.  ಸೊಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ. 5 ರಿಂದ 6ರ ಮದ್ಯದಲ್ಲಿದೆ.  ಚೇತರಿಸಿಕೊಳ್ಳುತ್ತಿರುವ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.  ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ(peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್- 19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಗಮನಿಸಲಾಯಿತು.  ಜನರ ಜೀವ ಮತ್ತು ಜೀವನ ನಿರ್ವಹಣೆ ಎರಡೂ ಸರಿದೂಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

 

Leave a Reply

ಹೊಸ ಪೋಸ್ಟ್‌