ಜಲವಿವಾದಗಳ ತ್ವರಿತ ವಿಚಾರಣೆಗೆ ಎಲ್ಲ ಪ್ರಯತ್ನ ಮಾಡಲು ಸಿಎಂ ಸೂಚನೆ ನೀಡಿದ್ದಾರೆ- ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಅಂತಾರಾಜ್ಯ ಜಲವಿವಾದಗಳ ತ್ವರಿತ ವಿಚಾರಣೆಗೆ ಅಗತ್ಯವಾಗಿರುವ ಎಲ್ಲ ಪ್ರಯತ್ನ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಸಚಿವರು, ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯ ಬಳಿಕ ಸಚಿವ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೃಷ್ಣಾ ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನ […]

ಅಂತಾರಾಜ್ಯ ಜಲವಿವಾದಗಳ ಬಗ್ಗೆ ಚರ್ಚಿಸಲು ಫೆಬ್ರುವರಿಯಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗುವುದು- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತಾರಾಜ್ಯ ಜಲವಿವಾದಗಳ ಬಗ್ಗೆ ಚರ್ಚಿಸಲು ಫೆಬ್ರವರಿಯಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಸಚಿವರು, ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.  ಈ ಸಭೆಯ ಬಳಿಕ ಮಾತನಾಡಿದ ಅವರು, ಅಂತಾರಾಜ್ಯ ಜಲವಿವಾದಗಳ ಬಗ್ಗೆ ಕಾನೂನು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಹಾಗೂ ಸಜಿವ ಗೋವಿಂದ ಕಾರಜೋಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಾಗಿದೆ […]

ವಿಜಯಪುರ ಜಿಲ್ಲೆಯಲ್ಲಿ ಒಂದೇ ದಿನ 305 ಜನರಲ್ಲಿ ಕೊರೊನಾ ಸೋಂಕು ಪತ್ತೆ- ಸಕ್ರೀಯ ಪ್ರಕರಣಗಳ ಸಂಖ್ಯೆ 1343ಕ್ಕೆ ಏರಿಕೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ಒಂದೇ ದಿನ 300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.  ಶುಕ್ರವಾರ(474)ಕ್ಕೆ ಹೋಲಿಸಿದರೆ ಈಗ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರೂ ಜನರಲ್ಲಿ ಆತಂಕ ಮನೆ ಮಾಡಿದೆ. ಈಗ ಒಂದೇ ದಿನ 305 ಜನರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರ ನಗರವೊಂದರಲ್ಲಿಯೇ 98 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 16, ಬಬಲೇಶ್ವರ ತಾಲೂಕಿನಲ್ಲಿ 7, ತಿಕೋಟಾ ತಾಲೂಕಿನಲ್ಲಿ 5, ಬಸವನ ಬಾಗೇವಾಡಿ ತಾಲೂಕಿನಲ್ಲಿ 29, ಕೊಲ್ಹಾರ ತಾಲೂಕಿನಲ್ಲಿ 12, ನಿಡಗುಂದಿ ತಾಲೂಕಿನಲ್ಲಿ […]

ನೀರು, ಹಾಲು, ವಿದ್ಯುತ್ ದರ ಏರಿಕೆ ಬಗ್ಗೆ ಅವಸರದ ತೀರ್ಮಾನ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನೀರು, ಹಾಲು ಹಾಗೂ ವಿದ್ಯುತ್ ದರ ಏರಿಕೆಯ ಕುರಿತು ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಬಗ್ಗೆ ಯಾವುದೇ ತರದ ಅವಸರದ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಎಲ್ಲಾ ಆಯಾಮಗಳಲ್ಲಿ ಈ ದರ ಏರಿಕೆ ಬಗ್ಗೆ ಪರಿಶೀಲಿಸಲಾಗುವುದು. ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.