ಬಸವ ಕಲ್ಯಾಣದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪದ ಮಾದರಿಯನ್ನೇ ಮರುಸೃಷ್ಠಿ ಮಾಡಿ- ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಬೀದರ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಬಸವ ಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಪ್ರಗತಿ ಕುರಿತು ಅವರು ಸಭೆ ನಡೆಸಿದರು. ಅಲ್ಲದೇ, ಅನುಭವ ಮಂಟಪದ ಪ್ರಾತ್ಯಕ್ಷಿಕೆಯನ್ನು ಸಿಎಂ ವೀಕ್ಷಿಸಿದರು. ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪವು ಸದಾ ಚಟುವಟಿಕೆಯಿಂದ ಕೂಡಿದ್ದು, ವಿಚಾರ ಮಂಥನ ನಡೆಯುತ್ತಿತ್ತು. ಪ್ರಸ್ತುತ ನಿರ್ಮಿಸುತ್ತಿರುವ ಅನುಭವ ಮಂಟಪದಲ್ಲಿಯೂ ನಿರಂತರ […]
ಗುಲ್ಬರ್ಗಾ ವಿವಿ ಪ್ರಥಮ ಸೆಮಿಸ್ಟರ್ ಪಠ್ಯದಲ್ಲಿ ಅಧಿಕಾರಿ ಸೋಮಲಿಂಗ ಗೆಣ್ಣೂರ ರಚಿತ ಕೃತಿಯ ಅಧ್ಯಾಯ ಸೇರ್ಪಡೆ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ರಚಿಸಿರುವ ಅಂಬೇಡ್ಕರ್ ಮಾರ್ಗ ಕೃತಿಯ ಒಂದು ಅಧ್ಯಾಯವನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಥಮ ಸೆಮಿಸ್ಟರ್ ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗುಲ್ಬರ್ಗ ವಿಶ್ವಾವಿದ್ಯಾಲವು ಸೋಮಲಿಂಗ ಗೆಣ್ಣೂರ ಅವರ ಅಂಬೇಡ್ಕರ್ ಮಾರ್ಗ ಕೃತಿಗೆ ಪ್ರಶಸ್ತಿ ನೀಡಿ ಗೌರವಸಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೋಮಲಿಂಗ ಗೆಣ್ಣೂರ, ತಾವು ಇಂಗ್ಲಿಷ್ ಮೀಡಿಯಮ್ ವಿದ್ಯಾರ್ಥಿಯಾಗಿದ್ದರೂ ಕಸ್ತೂರಿ ಕನ್ನಡವನ್ನು ಇಷ್ಟಪಟ್ಟು ಪ್ರೀತಿಯಿಂದ ಕನ್ನಡದ ಸೇವೆ ಮಾಡುತ್ತಿದ್ದೇನೆ. ಜೀವನದಲ್ಲಿ ಬರುವ ಸವಾಲುಗಳನ್ನು ಹೇಗೆ […]
ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮುಚ್ಚುವ ಪ್ರಶ್ನೇಯೇ ಇಲ್ಲ- ಸಚಿವ ಗೋವಿಂದ ಕಾರಜೋಳ
ವಿಜಯಪುರ: ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಹುನ್ನಾರ ನಡೆದಿದೆ ಎಂಬ ವಿಷಯ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಗೋವಿಂದ ಕಾರಜೋಳ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ […]
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ- ವಿಜಯಪುರ ಜಿಲ್ಲಾ ಉಸ್ತುವಾರಿ ಯಾರು ಗೊತ್ತಾ?
ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತೂ ಇಂತೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಈವರೆಗೆ ಕೊರೊನಾ ಮತ್ತು ಪ್ರವಾಹ ನಿರ್ವಹಣೆಗಾಗಿ ಮಾತ್ರ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಲಾಗಿತ್ತು. ಈಗ ಗಣರಾಜ್ಯೋತ್ಸವ ಸಮೀಪಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಲಾಗಿದೆ. ಅಲ್ಲದೇ, ಅವರಿಗೆ ಕೊರೊನಾ ನಿರ್ವಹಣೆ ಜವಾಬ್ದಾರಿಯನ್ನೂ ನೀಡಲಾಗಿದೆ. ಯಾರಿಗೆ ಯಾವ ಜಿಲ್ಲೆ ಉಸ್ತುವಾರಿ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಬಸವರಾಜ ಬೊಮ್ಮಾಯಿ- ಬೆಂಗಳೂರು ನಗರ ಗೋವಿಂದ ಕಾರಜೋಳ- ಬೆಳಗಾವಿ ಕೆ. ಎಸ್. ಈಶ್ವರಪ್ಪ- […]
ಬಸವ ನಾಡಿನಲ್ಲಿ ಮತ್ತೆ ಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ- ಸಕ್ರೀಯ ಪ್ರಕರಣಗಳ ಸಂಖ್ಯೆಯೂ ಹೆಚ್ಚಳ
ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಶತಕ ದಾಟಿದೆ. ಈಗ ಒಂದೇ ದಿನ 141 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಶನಿವಾರ- 305, ರವಿವಾರ- 321 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಈಗ ಒಂದೇ ದಿನ 141 ಜನರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರ ನಗರವೊಂದರಲ್ಲಿಯೇ 46 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 18, ಬಬಲೇಶ್ವರ ತಾಲೂಕಿನಲ್ಲಿ 0, ತಿಕೋಟಾ ತಾಲೂಕಿನಲ್ಲಿ 4, ಬಸವನ ಬಾಗೇವಾಡಿ ತಾಲೂಕಿನಲ್ಲಿ 5, […]
ಇನ್ನು ಮುಂದೆ ಊಟದ ಜೊತೆಗಷ್ಟೇ ಅಲ್ಲ, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಜೊತೆಗೂ ಉಪ್ಪಿನಕಾಯಿ ಸಿಗುವ ದಿನ ಬರಲಿವೆ- ಯಾಕೆ ಗೊತ್ತಾ?
ವಿಜಯಪುರ: ಊಟದ ಜೊತೆಗೆ ಉಪ್ಪಿನಕಾಯಿ ಇದ್ದರೆ ಅದರ ರುಚಿಯೇ ಬೇರೆ ಎಂಬುದು ಎಲ್ಲರೂ ಹೇಳುವ ಮಾತು. ಆದರೆ, ಇನ್ನು ಮುಂದೆ ಬಡವರು ಪಡೆಯುವ ಪಡಿತರ ಜೊತೆಗೆ ಉಪ್ಪಿನಕಾಯಿಯೂ ಕಡಿಮೆ ಬೆಲೆ ಸಿಗುವ ದಿನಗಳೂ ಹತ್ತಿರ ಬರಲಿವೆ. ಏಕೆಂದರೆ, ಇದರಿಂದ ಜನರಿಗೆ ಲಿಂಬೆಯಲ್ಲಿರುವ ಸಿಟ್ರಿಕ್ ಪೋಷಕಾಂಶ ಜನರ ಆರೋಗ್ಯಕ್ಕೆ ಪೂರಕವಾದರೆ, ಇದೇ ಲಿಂಬೆಯನ್ನು ನಂಬಿರುವ ಬೆಳೆಗಾರರ ಪಾಲಿಗೂ ಇದು ವರದಾನವಾಗಲಿದೆ. ಹೌದು ಇಂಥದ್ದೋದ್ದು ಜನೋಪಯೋಗಿ ಯೋಜನೆ ಜಾರಿಗೆ ಲಿಂಬೆ ಅಭಿವೃದ್ಧಿ ಮಂಡಳಿ ಯೋಜನೆ ರೂಪಿಸಿದ್ದು, ಈಗಾಗಲೇ ಈ ಕುರಿತು […]