ಗುಲ್ಬರ್ಗಾ ವಿವಿ ಪ್ರಥಮ ಸೆಮಿಸ್ಟರ್ ಪಠ್ಯದಲ್ಲಿ ಅಧಿಕಾರಿ ಸೋಮಲಿಂಗ ಗೆಣ್ಣೂರ ರಚಿತ ಕೃತಿಯ ಅಧ್ಯಾಯ ಸೇರ್ಪಡೆ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ರಚಿಸಿರುವ ಅಂಬೇಡ್ಕರ್ ಮಾರ್ಗ ಕೃತಿಯ ಒಂದು ಅಧ್ಯಾಯವನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಥಮ ಸೆಮಿಸ್ಟರ್ ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಗುಲ್ಬರ್ಗ ವಿಶ್ವಾವಿದ್ಯಾಲವು ಸೋಮಲಿಂಗ ಗೆಣ್ಣೂರ ಅವರ ಅಂಬೇಡ್ಕರ್ ಮಾರ್ಗ ಕೃತಿಗೆ ಪ್ರಶಸ್ತಿ ನೀಡಿ ಗೌರವಸಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸೋಮಲಿಂಗ ಗೆಣ್ಣೂರ, ತಾವು ಇಂಗ್ಲಿಷ್ ಮೀಡಿಯಮ್ ವಿದ್ಯಾರ್ಥಿಯಾಗಿದ್ದರೂ ಕಸ್ತೂರಿ ಕನ್ನಡವನ್ನು ಇಷ್ಟಪಟ್ಟು ಪ್ರೀತಿಯಿಂದ ಕನ್ನಡದ ಸೇವೆ ಮಾಡುತ್ತಿದ್ದೇನೆ.  ಜೀವನದಲ್ಲಿ ಬರುವ ಸವಾಲುಗಳನ್ನು ಹೇಗೆ ಎದುರಿಸಲು ವಿದ್ಯೆ ಪ್ರಮುಖ ಅಸ್ತ್ರವಾಗಿದೆ ಎಂಬುದನ್ನು ತಾವು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಚಿಂತನೆಗಳಿಂದ ತಿಳಿದುಕೊಂಡಿರುವುದಾಗಿ ತಿಳಿಸಿದರು.

ಸೋಮಲಿಂಗ ಗೆಣ್ಣೂರ ಈ ಮುಂಚೆ ವಿಜಯಪುರ ಜಿಲ್ಲೆಯಲ್ಲಿಯೂ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ಈಗ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

ಹೊಸ ಪೋಸ್ಟ್‌