ಚುನಾವಣೆ ಪ್ರಕ್ರಿಯೆಯಲ್ಲಿ ಉತ್ತಮ ಕಾರ್ಯಕ್ಷಮತೆ: ವಿಜಯಪುರ ಡಿಸಿ, ಸಿಇಓ, ಇಂಡಿ ಎಸಿಗೆ, ತಿಕೋಟಾದ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿಗೆ ಪ್ರಶಸ್ತಿ

ವಿಜಯಪುರ: ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ವಿಜಯಪುರ ಜಿಲ್ಲೆಗೆ ನಾಲ್ಕು ಪ್ರಶಸ್ತಿಗಳು ದೊರೆತಿವೆ.  ಚುನಾವಣೆ ಪ್ರಕ್ರಿಯೆಯಲ್ಲಿ ಉತ್ತಮ ಕಾರ್ಯಕ್ಷಮತೆಗಾಗಿ ರಾಜ್ಯ ಮಟ್ಟದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ.  ಬೆಂಗಳೂರಿನಲ್ಲಿ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರ ಸಮ್ಮುಖದಲ್ಲಿ ಈ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿಯಾದ ಬೆಸ್ಟ್ ಫರ್ಮಾಮೆನ್ಸ್ ಇನ್ ಎಲೆಕ್ಟ್ರೋಲ್ ಪ್ರ್ಯಾಕ್ಟಿಸಿಸ್‍ಗಾಗಿ ಈ ಪ್ರಶಸ್ತಿ ನೀಡಲಾಗಿದ್ದು, ಪಿ. ಸುನೀಲ […]

ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವುದೇ ತಮ್ಮ ಗುರಿ- ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಎಂ. ಬಿ. ಪಾಟೀಲ

ವಿಜಯಪುರ: 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಮರಳಿ ಅಧಿಕಾರಕ್ಕೆ ತರಲು ಡಿ. ಕೆ. ಶಿವಕುಮಾರ ಮತ್ತು ಎಸ್. ಸಿದ್ಧರಾಮಯ್ಯ ಹಾಗೂ ಇತರ ನಾಯಕರ ಜೊತೆಗೂಡಿ ಶ್ರಮಿಸುವುದಾಗಿ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ಸಿಕ್ಕಿರುವ ಬಗ್ಗೆ ಈ ಕುರಿತು ತಮಗೆ ಅಧಿಕೃತ ಆದೇಶ ಪ್ರತಿ ತಲುಪಿಲ್ಲ.  ಆದರೆ, ಪಕ್ಷದ ವರಿಷ್ಠರು ಈ ವಿಚಾರವನ್ನು ತಮಗೆ ತಿಳಿಸಿದ್ದಾರೆ ಎಂದು […]

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ. ಬಿ. ಪಾಟೀಲ ನೇಮಕದಿಂದ ಪಕ್ಷಕ್ಕೆ ಆನೆಬಲ‌ ಬಂದಿದೆ- ಸಂಗಮೇಶ ಬಬಲೇಶ್ವರ

ವಿಜಯಪುರ: ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಕೆಪಿಸಿಸಿ ಸದಸ್ಯ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಂ. ಬಿ. ಪಾಟೀಲ ಅವರನ್ನು ನೇಮಕ ಮಾಡಿರುವ ಹೈಕಮಾಂಡ್ ಗೆ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪ್ರಭಾವಿ ನಾಯಕರಾಗಿರುವ ಅವರ […]

ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರಕ್ಕೆ ಸ್ಥಾನ ಸಿಗಲಿದೆ- ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಯಾಗಬೇಕಿದೆ- ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣಿಗಳಿದ್ದಾರೆ- ಶಾಸಕ ಯತ್ನಾಳ

ವಿಜಯಪುರ: ಸಚಿವ ಸಂಪುಟದಲ್ಲಿ ಎಲ್ಲ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡದಿದ್ದರೆ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿದ ಜನರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಈಗ ಸಚಿವ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ‌ ಇವೆ,  ಅವುಗಳನ್ನು ತುಂಬಬೇಕು,  ಕೆಲ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಅನ್ಯಾಯವಾಗಿದೆ.  ಇದರಿಂದ ಆ ಜಿಲ್ಲೆಗಳಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿದ ಜನರಿಗೆ ಅಪಮಾನ ಮಾಡಿದಂತಾಗುತ್ತದೆ ಎಂದು ಹೇಳಿದರು. ನೀವು ಸಿಎಂ ಆಗಬೇಕಾದರೆ […]

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ. ಬಿ. ಪಾಟೀಲ ನೇಮಕ

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಮತ್ತು ಹಾಲಿ‌ ಶಾಸಕ ಎಂ. ಬಿ. ಪಾಟೀಲ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎಂ. ಬಿ. ಪಾಟೀಲ ಅವರನ್ನು ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಂ. ಬಿ. ಪಾಟೀಲ ಅವರನ್ನು ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ. […]