ವಿಜಯಪುರ: ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ವಿಜಯಪುರ ಜಿಲ್ಲೆಗೆ ನಾಲ್ಕು ಪ್ರಶಸ್ತಿಗಳು ದೊರೆತಿವೆ.
ಚುನಾವಣೆ ಪ್ರಕ್ರಿಯೆಯಲ್ಲಿ ಉತ್ತಮ ಕಾರ್ಯಕ್ಷಮತೆಗಾಗಿ ರಾಜ್ಯ ಮಟ್ಟದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರ ಸಮ್ಮುಖದಲ್ಲಿ ಈ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿಯಾದ ಬೆಸ್ಟ್ ಫರ್ಮಾಮೆನ್ಸ್ ಇನ್ ಎಲೆಕ್ಟ್ರೋಲ್ ಪ್ರ್ಯಾಕ್ಟಿಸಿಸ್‍ಗಾಗಿ ಈ ಪ್ರಶಸ್ತಿ ನೀಡಲಾಗಿದ್ದು, ಪಿ. ಸುನೀಲ ಕುಮಾರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅದರಂತೆ ಬೆಸ್ಟ್ ಫರ್ಮಾಮೆನ್ಸ್ ಇನ್ ಸ್ವೀಪ್‍ಗಾಗಿ ವಿಜಯಪುರ ಜಿ. ಪಂ. ಸಿಇಓ ಗೋವಿಂದ ರೆಡ್ಡಿ, ಬೆಸ್ಟ್ ಫರ್ಮಾಮೆನ್ಸ್ ಯಾಸ್ ರಿರ್ಟನಿಂಗ್ ಆಫೀಸರ್ ಆಗಿ ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಮತ್ತು ಬೆಸ್ಟ್ ಫರ್ಮಾಮಿಂಗ್ ಎಲೆಕ್ಟ್ರೋಲ್ ಲಿಟ್ರೆಸಿ ಕ್ಲಬ್ ಪ್ರಶಸ್ತಿಯನ್ನು ವಿಜಯಪುರ ಜಿಲ್ಲೆಯ ತಿಕೋಟಾದ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿಗೆ ಲಭಿಸಿದೆ.
ಈ ಪ್ರಶಸ್ತಿಗಳು ಲಭಿಸಲು ಕಾರಣರಾದ ಜಿಲ್ಲೆಯ ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕೃತಜ್ಞತೆಗಳನ್ನು ತಿಳಿಸಿದ್ದಾರೆ.