ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ. ಬಿ. ಪಾಟೀಲ ನೇಮಕ

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಮತ್ತು ಹಾಲಿ‌ ಶಾಸಕ ಎಂ. ಬಿ. ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎಂ. ಬಿ. ಪಾಟೀಲ ಅವರನ್ನು ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಂ. ಬಿ. ಪಾಟೀಲ ಅವರನ್ನು ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌