ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವುದೇ ತಮ್ಮ ಗುರಿ- ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಎಂ. ಬಿ. ಪಾಟೀಲ

ವಿಜಯಪುರ: 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಮರಳಿ ಅಧಿಕಾರಕ್ಕೆ ತರಲು ಡಿ. ಕೆ. ಶಿವಕುಮಾರ ಮತ್ತು ಎಸ್. ಸಿದ್ಧರಾಮಯ್ಯ ಹಾಗೂ ಇತರ ನಾಯಕರ ಜೊತೆಗೂಡಿ ಶ್ರಮಿಸುವುದಾಗಿ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ಸಿಕ್ಕಿರುವ ಬಗ್ಗೆ ಈ ಕುರಿತು ತಮಗೆ ಅಧಿಕೃತ ಆದೇಶ ಪ್ರತಿ ತಲುಪಿಲ್ಲ.  ಆದರೆ, ಪಕ್ಷದ ವರಿಷ್ಠರು ಈ ವಿಚಾರವನ್ನು ತಮಗೆ ತಿಳಿಸಿದ್ದಾರೆ ಎಂದು ಹೇಳಿದರು.

ತಮ್ಮನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಜವಾಬ್ದಾರಿ ನೀಡಿರುವುದಕ್ಕೆ ತಾವು ಎ ಐ ಸಿ ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.  ಅವರು ನನ್ನ ಮೇಲೆ ಅವರು ವಿಶ್ವಾಸ ಇಟ್ಟಿದ್ದಾರೆ.  ಅದೇ ರೀತಿ ರಾಹುಲ್ ಗಾಂಧಿ ಅವರಿಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಎಐಸಿಸಿ ಪದಾಧಿಕಾರಿಗಳಿಗೆ, ರಾಜ್ಯ ಕಾಂಗ್ರೆಸ್ ಉಸ್ತುಬಾರಿ ರಂದೀಪಸಿಂಗ್ ಸುರ್ಜೆವಾಲಾ ಅವರಿಗೆ ಹಾಗೂ ಸುರ್ಜೆವಾಲಾ, ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ವಿಜಯಪುರ ಜಿಲ್ಲೆಯ ಬಬಲೇಶ್ವರ ಶಾಸಕರೂ ಆಗಿರುವ ಎಂ. ಬಿ. ಪಾಟೀಲ ತಿಳಿಸಿದರು.

ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಎಲ್ಲ ನಾಯಕರು ನನಗೆ ಜವಾಬ್ದಾರಿ ನೀಡಿದ್ದಾರೆ.  ಕೆ ಪಿ ಸಿ ಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಹಾಗೂ ಎಲ್ಲ ನಾಯಕರೊಂದಿಗೆ ಸೇರಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಮರಳಿ ಅಧಿಕಾರಕ್ಕೆ ಬರಲು ಶ್ರಮಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಹಿಂದಿನಂತೆ ಜನಪರ ಆಡಳಿತ ನೀಡಲು ಪ್ರಯತ್ನ ಮಾಡುತ್ತೇವೆ.  ನನ್ನ ಮೇಲೆ ಇಟ್ಟಿರುವ ಭರವಸೆಗೆ ತಕ್ಕಂತೆ ಕೆಲಸ ಮಾಡುತ್ತೇನೆ.  ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕೆಲಸ ಮಾಡುವೆ ಎಂದು ಹೇಳಿದ ಅವರು, ಲಿಂಗಾಯತ ಸಮುದಾಯಕ್ಕೆ ಪ್ರಚಾರ ಸಮೀತಿ ಅಧ್ಯಕ್ಷ ಸ್ಥಾನ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು.  ಇಲ್ಲಿ ಜಾತಿಯತೆ ಉದ್ಬವಿಸಲ್ಲ.  ಇದೊಂದು ಚಾಲೆಂಜಿಂಗ್ ಜಾಬ್.  ಎಲ್ಲ ಹಿರಿಯರು, ಕಿರಿಯ ನಾಯಕರ ಸಹಾಯದೊಂದಿಗೆ ಒಂದಾಗಿ ಕೆಲಸ ಮಾಡುತ್ತೇವೆ.  ಟೀಂ ವರ್ಕ್ ಮಾಡುತ್ತೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳಿಲ್ಲ.  ನಮ್ಮದು ಒಂದೇ ಬಣ.  ಅದು ಕಾಂಗ್ರೆಸ್ ಬಣ.  ನಮ್ಮಲ್ಲಿ ಭಿನ್ನಾಭಿಪ್ರಾಯ ಬರಬಾರದು, ಭಿನ್ನಾಭಿಪ್ರಾಯ ಇಲ್ಲ.  ಅದು ಬರಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದರು.

Leave a Reply

ಹೊಸ ಪೋಸ್ಟ್‌