ಬಸವ ನಾಡಿನಲ್ಲಿ ಮತ್ತೆ ದ್ವಿಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ- 222 ಜನ ಗುಣಮುಖರಾಗಿ ಡಿಶ್ಚಾರ್ಜ್
ವಿಜಯಪುರ: ಗುಮ್ಮಟ ನಗರಿ ಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದ್ವಿಶತಕ ದಾಟಿದೆ. ಈಗ ಒಂದೇ ದಿನ 250 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ವಿಜಯಪುರ ನಗರವೊಂದರಲ್ಲಿಯೇ 70 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 15, ಬಬಲೇಶ್ವರ ತಾಲೂಕಿನಲ್ಲಿ 2, ತಿಕೋಟಾ ತಾಲೂಕಿನಲ್ಲಿ 4, ಬಸವನ ಬಾಗೇವಾಡಿ ತಾಲೂಕಿನಲ್ಲಿ 20, ಕೊಲ್ಹಾರ ತಾಲೂಕಿನಲ್ಲಿ 8, ನಿಡಗುಂದಿ ತಾಲೂಕಿನಲ್ಲಿ 0, ಇಂಡಿ ತಾಲೂಕಿನಲ್ಲಿ 21, ಚಡಚಣ ತಾಲೂಕಿನಲ್ಲಿ 0, ಮುದ್ದೇಬಿಹಾಳ ತಾಲೂಕಿನಲ್ಲಿ […]
ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಗೆ ಚಡಚಣ ಬ್ಲಾಕ್ ಕಾಂಗ್ರೆಸ್ ಮುಖಂಡರು, ಸಂಗಮೇಶ ಬಬಲೇಶ್ವರ ಅವರಿಂದ ಅಭಿನಂದನೆ ಸಲ್ಲಿಕೆ
ವಿಜಯಪುರ: ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಂತಸದಲ್ಲಿರುವ ಕಾಂಗ್ರೆಸ್ ಮುಖಂಡರು ವಿಜಯಪುರದಲ್ಲಿರುವ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ. ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ಡಿ. ಹಕ್ಕೆ, ಮಾಜಿ ಶಾಸಕ ವಿಠ್ಠಲ ಧೋ. ಕಟಕದೂಂಡ, ನ್ಯಾಯವಾದಿ ಪವಾರ, ಶಬ್ಬೀರ ನದಾಫ್, ಯುನೀಸ್ ಅಲಿ ಮಕಾಂದಾರ, ನಾರಾಯಣ ವಾಘಮೋರೆ, ನಾರಾಯಣ ವಾಘಮೂರೆ, […]
ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ರೂ. 180 ಕೋ. ವೆಚ್ಚದಲ್ಲಿ ಮಿಲಿಟರಿ ಶಾಲೆ- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ರಾಜ್ಯ ಸರಕಾರ ರೂ. 180 ಕೋ. ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ ಸ್ಮರಣೋತ್ಸವದ ಅಂಗವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು. ಈ ಮಿಲಿಟರಿ ಶಾಲೆ ಆರಂಭಿಸುವ ಉದ್ದೇಶಕ್ಕಾಗಿ ರೂ. 55 ಕೋ. ಹಣವನ್ನು ಸರಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ರಕ್ಷಣಾ ಇಲಾಖೆ […]
ಯತ್ನಾಳ ಶೀಘ್ರದಲ್ಲಿ ಸಚಿವರಾಗಲಿದ್ದಾರೆ- ಸಚಿವ ಸಂಪುಟ ವಿಸ್ತರಣೆ ವಿಚಾರ ನಿರಂತರ ಜ್ಯೋತಿ- ಯಾವುದೇ ಗುಪ್ತ ಸಭೆ ನಡೆಸಿಲ್ಲ- ಸಚಿವ ಉಮೇಶ ಕತ್ತಿ
ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಶೀಘ್ರದಲ್ಲಿ ಸಚಿವರಾಗಲಿದ್ದಾರೆ ಎಂದು ಅರಣ್ಯ, ಆಹಾರ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ನೂತನ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿರುವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಚಿವ ಸಂಪುಟದಲ್ಲಿ ವಿಜಯಪುರ ಜಿಲ್ಲೆಗೆ ಅನ್ಯಾಯವಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಂತ್ರಿ ಆಗೇ […]
ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ- ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ರಿಂದ ಧ್ವಜಾರೋಹಣ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವವನ್ನು ಸಡಗರ ಮತ್ತು ಸಂಭ್ರಮಗಳಿಂದ ಆಚರಿಸಲಾಯಿತು. ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ ನಾನಾ ಪದಾತಿ ದಳಗಳ ಪಥಸಂಚಲನ ವೀಕ್ಷಿಸಿದರು. ಅಲ್ಲದೇ, ಗೌರವ ವಂದನೆ ಸ್ವೀಕರಿಸಿದರು. ಅಲ್ಲದೇ, ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಆರ್. ಅಶೋಕ ಸೇರಿದಂತೆ […]
ಭಾರತ ಇಂದು ಜಗತ್ತಿನಲ್ಲಿಯೇ ಅತ್ಯಂತ ಬಲಿಷ್ಠ, ಪ್ರಭಾವಶಾಲಿ ಗಣತಂತ್ರ ರಾಷ್ಟ್ರ- ಸಚಿವ ಉಮೇಶ ಕತ್ತಿ
ವಿಜಯಪುರ: ಭಾರತ ಇಂದು ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಹಾಗೂ ಪ್ರಭಾವಶಾಲಿ ಗಣತಂತ್ರ ರಾಷ್ಟ್ರವಾಗಿದೆ ಎಂದು ಅರಣ್ಯ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದರುವ ಕ್ರೀಡಾಂಗಣದಲ್ಲಿ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಗಣರಾಜೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಬಸವಾದಿ ಪ್ರಮಥರು ಹಾಗೂ ಕಂಪನಶೀಲ ವೈಚಾರಿಕತೆ ಮತ್ತು ಕ್ರಾಂತಿಕಾರಿ ನಿರ್ಧಾರಗಳ […]