ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವವನ್ನು ಸಡಗರ ಮತ್ತು ಸಂಭ್ರಮಗಳಿಂದ ಆಚರಿಸಲಾಯಿತು.
ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ ನಾನಾ ಪದಾತಿ ದಳಗಳ ಪಥಸಂಚಲನ ವೀಕ್ಷಿಸಿದರು. ಅಲ್ಲದೇ, ಗೌರವ ವಂದನೆ ಸ್ವೀಕರಿಸಿದರು. ಅಲ್ಲದೇ, ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಆರ್. ಅಶೋಕ ಸೇರಿದಂತೆ ನಾನಾ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.