ಸಿಎಂ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ- ಕೆಲವು ಮುಖಂಡರ ಹೇಳಿಕೆಗಳು ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರುತ್ತಿವೆ- ಅಂಥವರಿಗೆ ವರಿಷ್ಠರು ಕಡಿವಾಣ ಹಾಕಲಿ- ರಮೇಶ ಜಿಗಜಿಣಗಿ

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ನಾಯಕರು ಮನಬಂದಂತೆ ಕೊಡುವ ಹೇಳಿಕೆಗಳಿಂದ ಉತ್ತಮ ಆಡಳಿತಕ್ಕೆ ಸಮಸ್ಯೆಯಾಗುತ್ತಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 30 ತಿಂಗಳಾಯಿತು.  ಮೊದಲಿನ 24 ತಿಂಗಳು ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು.  ಅವರ ಕಾಲದಲ್ಲೂ ಪಕ್ಷದ ನಾಯಕರು ಮನಬಂದಂತೆ ಹೇಳಿಕೆ ನೀಡಿದ ಪರಿಣಾಮ ಅನೇಕ ಸಮಸ್ಯೆ ಉಂಟಾಗಿವೆ.  ಅದರಲ್ಲೂ ಸಂಪುಟ ವಿಸ್ತರಣೆ ಕುರಿತಾದ […]

ಕಮಾಂಡೆಂಟ್ ಎಸ್. ಡಿ. ಪಾಟೀಲ ಅವರ ಕಾರ್ಯವೈಖರಿ, ಸೇವಾ ನಿಷ್ಠೆ ಇತರರಿಗೂ ಮಾದರಿ- ಕೆ ಎಸ್ ಆರ್ ಪಿ ಎಡಿಜಿಪಿ ಅಲೋಕಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯ ಐ ಆರ್ ಬಿ ಕಮಾಂಡೆಂಟ್ ಎಸ್. ಡಿ  ಪಾಟೀಲ ಅವರ ಕಾರ್ಯವೈಖರಿ ಮತ್ತು ಸೇವಾ ನಿಷ್ಠೆ ಇತರರಿಗೂ ಮಾದರಿಯಾಗಿದೆ ಎಂದು ಕೆ ಎಸ್ ಆರ್ ಪಿ ಎಡಿಜಿಪಿ ಅಲೋಕಕುಮಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಅರಕೇರಿ ಬಳಿ ಇರುವ ಭಾರತೀಯ ಮೀಸಲು ಪಡೆ ಕಚೇರಿಗೆ ಭೇಟಿ ನೀಡಿದ ಅವರು, ಜ. 31 ರಂದು ನಿವೃತ್ತರಾಗಲಿರುವ ವಿಜಯಪುರ ಐ ಆರ್ ಬಿ ಕಮಾಂಡೆಂಟ್ ಎಸ್. ಡಿ. ಪಾಟೀಲ ಅವರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.  ಅಲ್ಲದೇ, ಎಸ್. […]

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ರಾಜ್ಯ ಸರಕಾರದ ನಾನಾ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆ ಅಂಗವಾಗಿ ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲು ಮತ್ತು ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.  ನೀರಾವರಿ ಸಚಿವ […]

ಭಾರತೀಯ ಮೀಸಲು ಪೊಲೀಸ್ ಪಡೆಯ ಅಧಿಕಾರಿಗಳು, ಸಿಬ್ಬಂದಿ ದೈಹಿಕ ತೂಕ ಇಳಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು- ಎಡಿಜಿಪಿ ಅಲೋಕ ಕುಮಾರ

ವಿಜಯಪುರ: ಭಾರತೀಯ ಮೀಸಲು ಪೊಲೀಸ್ ಪಡೆ(ಐ ಆರ್ ಬಿ)ಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈಹಿಕ ತೂಕ ಇಳಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸದೃಢವಾಗಿ ಕಾಪಾಡಿಕೊಳ್ಳಬೇಕು ಎಂದು ಕೆ ಎಸ್ ಆರ್ ಪಿ ಯ ಎಡಿಜಿಪಿ ಅಲೋಕ ಕುಮಾರ ಕಿವಿಮಾತು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಅರಕೇರಿ ಬಳಿ ಇರುವ ಭಾರತೀಯ ಮೀಸಲು ಪಡೆ ಕಚೇರಿಗೆ ಭೇಟಿ ನೀಡಿದ ಅವರು ಸೇವಾ ಕವಾಯತು ವಿಕ್ಷಿಸಿ ಅವರು ಮಾತನಾಡಿದ ಅವರು ಮುಂಬರುವ ಗೋವಾ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ […]

ವಿಜಯಪುರ ಜಿಲ್ಲಾ ಅಬಕಾರಿ ವಿಚಕ್ಷಣೆ ದಳ ಪೊಲೀಸರಿಂದ ಗಾಂಜಾ ಜಪ್ತಿ, ಆರೋಪಿ ಬಂಧನ

ವಿಜಯಪುರ: ವಿಜಯಪುರ ಜಿಲ್ಲಾ ಅಬಕಾರಿ ವಿಚಕ್ಷಣೆ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ‌. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಹೊರ ವಲಯದಲ್ಲಿ ಈ ಕಾರ್ಯಾಚರಣೆ ನಡೆದಿದೆ. ವಿಜಯಪುರದ ಆರೋಪಿ ಯಶವಂತ ಸಿದ್ದಪ್ಪ ಎಂಬ ಆರೋಪಿ ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಪಡೆದು ಧಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಬಳಿಯಿದ್ದ 3 ಕೆಜಿ ಅಕ್ರಮವಾಗಿ ಸಾಗಿಸುತ್ತಿದ್ದ ಒಣಗಿದ ಗಾಂಜಾ, ದ್ವಿಚಕ್ರ ವಾಹನ ವಶಪಡಿಸಿಕೊಂಡು […]

ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ 139 ಜನರಲ್ಲಿ ಕೊರೊನಾ ಸೋಂಕು ಪತ್ತೆ- ತಾಲೂಕುವಾರು ಮಾಹಿತಿ ಇಲ್ಲಿದೆ

ವಿಜಯಜಯಪುರ: ಗುಮ್ಮಟ ನಗರಿ ಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದ್ವಿಶತಕ ದಾಟಿದೆ. ಈಗ ಒಂದೇ ದಿನ 250 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ವಿಜಯಪುರ ನಗರವೊಂದರಲ್ಲಿಯೇ 70 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 15, ಬಬಲೇಶ್ವರ ತಾಲೂಕಿನಲ್ಲಿ 2, ತಿಕೋಟಾ ತಾಲೂಕಿನಲ್ಲಿ 4, ಬಸವನ ಬಾಗೇವಾಡಿ ತಾಲೂಕಿನಲ್ಲಿ 20, ಕೊಲ್ಹಾರ ತಾಲೂಕಿನಲ್ಲಿ 8, ನಿಡಗುಂದಿ ತಾಲೂಕಿನಲ್ಲಿ 0, ಇಂಡಿ ತಾಲೂಕಿನಲ್ಲಿ 21, ಚಡಚಣ ತಾಲೂಕಿನಲ್ಲಿ 0, ಮುದ್ದೇಬಿಹಾಳ ತಾಲೂಕಿನಲ್ಲಿ […]

ಜ. 31 ರಿಂದ ರಾತ್ರಿ ಕರ್ಫ್ಯೂ ರದ್ದು- ಕೊರೊನಾ ನಿರ್ಬಂಧಗಳು ಮತ್ತಷ್ಟು ಸಡಿಲ

ಬೆಂಗಳೂರು: ಕೊರೊನಾ ನಿಯಂತ್ರಿಸಲು ವಿಧಿಸಲಾಗಿದ್ದ ನಿರ್ಬಂಧಗಳನ್ನು ಸರಕಾರ ಸಡಿಲಗೊಳಿಸಿದ್ದು, ಜ. 31 ರಿಂದ ರಾತ್ರಿ ಕರ್ಫ್ಯೂ ರದ್ದುಪಡಿಸಿದೆ. ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೊರೊನಾ ಕುರಿತು ತಜ್ಞರು ಮತ್ತು ಅಧಿಕಾರಿಗಳು ಚರ್ಚೆ ನಡೆಸಿದರು. ಕೊರೊನಾದಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಅಲ್ಲದೇ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ‌ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ […]