ಬೆಂಗಳೂರು: ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ 85ನೇ ಆವೃತ್ತಿಯನ್ನು ನಡೆಸಿಕೊಟ್ಟರು.
ಪ್ರಧಾನಿಗಳು ನಡೆಸಿಕೊಟ್ಟ ಈ ಕಾರ್ಯಕ್ರಮವನ್ನು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬಿಜೆಪಿ ಶಾಸಕ ಕಳಕಪ್ಪ ಬಂಡಿ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಿ. ಸಿ. ಪಾಟೀಲ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿ ಕೊಡುವ ಮನ್ ಕಿ ಬಾತ್ ತಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದರು.