ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿ- ಜಿಲ್ಲಾ ಪ್ರಧಾನ, ಸತ್ರ ನ್ಯಾಯಾಧೀಶ ಜಿ. ಜಿ. ಕುರವತ್ತಿ

ವಿಜಯಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ. ಜಿ. ಕುರವತ್ತಿ ಹೇಳಿದ್ದಾರೆ.

ವಿಜಯಪುರ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಹುತಾತ್ಮರ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಜನರು ತಮ್ಮ ಪ್ರಾಣವನ್ನೇ ನೀಡಿದ್ದಾರೆ.  ನಮ್ಮ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಪ್ರತಿ ವರ್ಷವೂ ಜನೇವರಿ 30 ರಂದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮಾ ಗಾಂಧಿಯವರಂಥ ಮಹಾನುಭಾವರ ತ್ಯಾಗ, ಬಲಿದಾನಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀಜಿ ಅವರು ನಮ್ಮನ್ನಲಿದ ದಿನವನ್ನೇ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮೂರು ಭಜನೆಗಳನ್ನು ಹಾಡಲಾಯಿತು.  ಅಲ್ಲದೇ, ಎರಡು ನಿಮಿಷ ಮೌನ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ನ್ಯಾಯಾಧೀಶರಾದ ವೆಂಕಟೇಶ್ ಜೋಶಿ, ರವೀಂದ್ರ ಕಾರಬಾರಿ, ಸುಭಾಷ ಹೊಸಕಲೆ, ಸವಿತಾ ಕುಮಾರಿ, ಭಾಗ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಾರುತಿ ಜಿಪರೆ, ಪದ್ಮಶ್ರೀ, ಸಂತೋಷ, ಶ್ರೀನಾಥ, ಸಿವಿಲ್ ನ್ಯಾಯಾಧೀಶ ಉಮೇಶ, ಯಲ್ಲಪ್ಪ ಕಲ್ಲಾಪುರ, ವಿಶ್ವನಾಥ ಸವದಿ, ಚಾಂದಿನಿ ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌