ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ವಿಜಯಪುರ ಹುತಾತ್ಮ ವೃತ್ತದಲ್ಲಿ ಹುತಾತ್ಮರ ದಿನ ಆಚರಣೆ

ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಸಂಸ್ಮರಣೆ ಹಿನ್ನೆಲೆಯಲ್ಲಿ ವಿಜಯಪುರ ನಗರದ ಹುತಾತ್ಮ ವೃತ್ತದಲ್ಲಿ ನಗರದ  ಹುತಾತ್ಮ ವೃತ್ತದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಯುವ ಜನಸೇವೆ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಭಾರತ ಸೇವಾ ದಳ ಹಾಗೂ ನೆಹರು ಯುವ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಹುತಾತ್ಮರ ದಿನವನ್ನು ಶ್ರದ್ಧಾ ಭಕ್ತಿಯಿಂದ  ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಹೆಚ್ಚುವರಿ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಗಣ್ಯರು ಮಹಾತ್ಮಾ ಗಾಂಧೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಬಳಿಕ ಭಾರತ ಸೇವಾದಳದ ವತಿಯಿಂದ ಸಾಮೂಹಿಕ ಸರ್ವಧರ್ಮ ಪ್ರಾರ್ಥನೆ, ವೈಷ್ಣವ ಜನತೋ ಹಾಗೂ ರಘುಪತಿ ರಾಘವ ರಾಜಾ ರಾಮ ಭಜನೆಗಳನ್ನು ಹಾಡಲಾಯಿತು.  ನಂತರ ಹುತಾತ್ಮರ ದಿನದ ಕುರಿತಾಗಿ ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಕಿರುಭಾಷಣ ಕಾರ್ಯಕ್ರಮವೂ ನಡೆಯಿತು.

ಈ ವೇಳೆ ಬಾಲಕಿಯರ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಪ್ರೀತಿ ದಳವಾಯಿ, ಬಾಲಕರ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ವಿವೇಕ ಕುಮಾರ, ವರುಣ ಬಿಸಲನಾಯಕ, ಭೀಮಣ್ಣ ಚಲವಾದಿ, ರಶ್ಮಿ ಹಿರೇಮಠ, ಮಾತನಾಡಿದರು.

ಬಳಿಕ ಹುತಾತ್ಮ ವೃತ್ತದಿಂದ ಗಾಂಧಿ ಚೌಕ್ ವರೆಗೆ ಎನ್ ಸಿ ಸಿ ಮತ್ತು ಸ್ಕೌಟ್ಸ್ ಆಂಡ್ ಗೈಡ್ಸ್ ತಂಡಗಳ ಯುವಕರು ಮಾರ್ಚ್ ನಡೆಸಿದರು.  ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮುಂತಾದವರು ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಡಿಡಿಪಿಐ ಎನ್. ವಿ  ಹೊಸೂರ, ನೆಹರು ಯುವ ಕೇಂದ್ರದ ರಾಹುಲ್ ಡೋಂಗ್ರೆ, ನ್ಯಾಯವಾದಿ ವಿದ್ಯಾವತಿ ಅಂಕಲಗಿ, ಎಸ್. ಡಿ  ಬಿರಾದಾರ, ವಿಜಯಪುರ ತಹಸೀಲ್ದಾರ ಬೋಸಗಿ ಸೇರಿದಂತೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಶಿಕ್ಷಕ, ಶಿಕ್ಷಕಿಯರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌