ವಿಜಯಪುರ: ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕಾಂಗ್ರೆಸ್ ಹೈಕಮಾಂಡ ಮತ್ತೋಂದು ಜವಾಬ್ದಾರಿ ವಹಿಸಿದೆ.
ಇತ್ತೀಚೆಗಷ್ಟೇ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನೇಮಕ ಮಾಡಿತ್ತು. ಇದೀಗ ಪಂಚ ರಾಜ್ಯಗಳ ಚನಾವಣೆಯಲ್ಲಿ ಮತ್ತೋಂದು ಜವಾಬ್ದಾರಿ ವಹಿಸಿದೆ
ಗೋವಾ ಚುನಾವಣೆ ಕಾಂಗ್ರೆಸ್ ವೀಕ್ಷರನ್ನಾಗಿ ಎಂ. ಬಿ. ಪಾಟೀಲ ಅವರನ್ನು ಎಐಸಿಸಿ ನೇಮಕ ಮಾಡಿ ಮತ್ತೋಂದು ಹೊಸ ಜವಾಬ್ದಾರಿ ನೀಡಿದೆ. ಇದು ಎಐಸಿಸಿಯಲ್ಲಿ ಎಂ. ಬಿ. ಪಾಟೀಲ ಅವರು ವರ್ಚಸ್ಸು ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.
ಮಂಗಳವಾರ ಗೋವಾಕ್ಕೆ ಎಂ. ಬಿ. ಪಾಟೀಲ
ಈ ಮಧ್ಯೆ, ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ವೀಕ್ಷಕರಾಗಿ ನೇಮಕವಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಫೆ. 1 ರಂದು ಮಂಗಳವಾರ ಮ. 3ಕ್ಕೆ ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಗೋವಾಗೆ ತೆರಳಲಿದ್ದಾರೆ. ಅಲ್ಲದೇ, ಕಾಂಗ್ರೆಸ್ ಪಕ್ಷದ ಸರಣಿ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಗೋವಾದಲ್ಲಿ ನೆಲೆಸಿರುವ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾಂಗ್ರೆಸ್ ಪಕ್ಷಕ್ಕೆ ವ್ಯಾಪಕ ಬೆಂಬಲ ನೀಡಬೇಕು ಎಂದು ಶಾಸಕರ ಕಚೇರಿ ಪ್ರಕಟಣೆಯಲ್ಲಿ ಕೋರಲಾಗಿದೆ.