ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತಮ ಬಜೆಟ್ ಮಂಡಿಸಿದ್ದಾರೆ- ಉಮೇಶ ಕಾರಜೋಳ

ವಿಜಯಪುರ: ಉತ್ತರ ಪ್ರದೇಶ ಮತ್ತು ಪಂಜಾಬ ಚುನಾವಣೆಯನ್ನು ದೃಷ್ಟಿಕೋನದಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳನ್ನು ಘೋಷಿಸದೇ ಜನರ ಪರವಾಗಿ ಬಜೆಟ್ ಮಂಡನೆ ಮಾಡುವ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮವಾದ ಕೊಡುಗೆ ನೀಡಿದ್ದಾರೆ ಎಂದು ಬಿಜೆಪಿ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹೇಳಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕೇವಲ ಚುನಾವಣೆ ದೃಷ್ಟಿಕೋನದಿಂದ ಬಜೆಟ್ ಮಂಡನೆ ಮಾಡುತ್ತಾರೆ ಎಂಬ ವಿಪಕ್ಷಗಳಿಗೆ ಸೊಪ್ಪು ಹಾಕದೇ ಜನಪರ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಕೋನವಿರಿಸಿ ಕೇಂದ್ರ ಹಣಕಾಸು […]

ಕೇಂದ್ರ ಬಜೆಟ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಿಜುಗೌಡ ಪಾಟೀಲ, ಜಿಲ್ಲಾ ನಾಯಕರು

ವಿಜಯಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಮಂಡಿಸಿದ ಬಜೆಟ್ ನ್ನು ವಿಜಯಪುರ ಜಿಲ್ಲಾ ಬಿಜೆಪಿ ನಾಯಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮುಖಂಡರು ಈ ಬಜೆಟ್ ಸರ್ವರ ಪರವಾಗಿದೆ ಎಂದು ಹೇಳಿದ್ದಾರೆ. ರಮೇಶ ಜಿಗಜಿಮಗಿ, ವಿಜಯಪುರ ಸಂಸದ ಈ ಬಜೆಟ್ ನಲ್ಲಿ ಕಲಿಕೆಗೆ ಒತ್ತು ನೀಡಲಾಗಿದೆ.  ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮಕ್ಕಳ ಕಲಿಕೆಗೆ ತೊಂದೆಯಾಗಬಾರದು ಎಂಬ ಹಿನ್ನೆಲೆಯಲ್ಲಿ ಒಂದು ತರಗತಿ ಒಂದು ಟಿವಿ ಚಾನೆಲ್ ಘೋಷಣೆಯಡಿ 200 ಟಿವಿ ವಾಹಿನಿಗಳಿಗೆ ಅವಕಾಶ […]

ಕೇಂದ್ರ ಬಜೆಟ್ ಚುನಾಣೆಗಳನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿದ ಭಿತ್ತಿಪತ್ರದಂತೆ ಭಾಸವಾಗುವಂತಿದೆ- ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ

ವಿಜಯಪುರ: ಕೇಂದ್ರ ಬಜೆಟ್ ಪಂಚರಾಜ್ಯ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿದ ಭಿತ್ತಿ ಪತ್ರದಂತೆ ಭಾಸವಾಗುತ್ತಿದೆ ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಹಣಕಾಸು ನಿರ್ಮಲಾ ಸೀತಾರಾಮನ ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದೆ.  ಆಡಳಿತ ಪಕ್ಷದ ಸದಸ್ಯರು ಮೇಜುಕುಟ್ಟಿ ಸ್ವಾಗತಿಸುವುದನ್ನು ನೋಡಿದರೆ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಂತಿದೆ.  ಇದರಿಂದ ಮಧ್ಯಮ ಹಾಗೂ ಬಡ ಮಧ್ಯಮ ವರ್ಗದ ಭಾರತೀಯರ ಕನಸುಗಳನ್ನು ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಬಜೆಟನ ಘೋಷಣೆಗಳು ಘೋಷಣೆಗಳಾಗಿಯೇ ಉಳಿದರೆ […]

ರೈತರು, ಯುವಕರು, ಮಧ್ಯಮ ವರ್ಗದವರ ಪಾಲಿಗೆ ನಿರಾಶಾದಾಯಕ ಬಜೆಟ್- ಎಂ. ಬಿ. ಪಾಟೀಲ

ಬೆಂಗಳೂರು: ಕೇಂದ್ರ ಬಜೆಟ್ ನೌಕರರು, ಮಧ್ಯಮ ವರ್ಗದವರು, ಬಡವರು, ರೈತರು ಮತ್ತು ಆರ್ಥಿಕವಾಗಿ ಸಂಕಷ್ಟದಲ್ಲಿರುವವರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನಿರಾಸೆ ಮೂಡಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ. ಗೋವಾ ಚುನಾವಣೆ ಹಿನ್ನೆಲೆ ಎಐಸಿಸಿ ವೀಕ್ಷಕರಾಗಿ ತೆರಳಿರುವ ಎಂ. ಬಿ. ಪಾಟೀಲ ಅಲ್ಲಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದ್ದು, ಜನಸಾಮಾನ್ಯರ ಪಾಲಿಗೆ ಹೊರೆಯಾದ ಬಜೆಟ್ ಆಗಿದೆ […]

ಆರ್ಥಿಕ ಸುಧಾರಣೆ, ಸ್ಥಿರೀಕರಣ ಮತ್ತು ಬೆಳೆವಣಿಗೆಗೆ ಪೂರಕವಾದ ಕೇಂದ್ರ ಬಜೆಟ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂಬರುವ ವರ್ಷದಲ್ಲಿ ಆರ್ಥಿಕ ಸುಧಾರಣೆ, ಸ್ಥಿರೀಕರಣ ಮತ್ತು ಬೆಳೆವಣಿಗೆಗೆ ಪೂರಕವಾದ ಕೇಂದ್ರ ಬಜೆಟ್ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2022-23ನೇ ಆರ್ಥಿಕ ವರ್ಷದ ಕೇಂದ್ರ ಮುಂಗಡ ಪತ್ರಕ್ಕೆ ಸಂಬಂಧಿಸಿದಂತೆ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೋವಿಡ್ ನೆರಳಿನಲ್ಲಿ ಭಾರತದ ಆರ್ಥಿಕತೆಯನ್ನು ಶೇ.9.2 %  ಹೆಚ್ಚಿಸುವ ಗುರಿಯಯನ್ನು ಹೊಂದಿದೆ. ಬಂಡವಾಳ ಹೂಡಿಕೆ ಹಾಗೂ ಬಳಕೆ […]

ಸವನಹಳ್ಳಿ, ಹೊನಗನಹಳ್ಳಿ ವಿಜಯಪುರ ತಾಲೂಕಿಗೆ ಮರುಸೇರ್ಪಡೆ- ಎಂ. ಬಿ. ಪಾಟೀಲ

ಬೆಂಗಳೂರು. ಬಬಲೇಶ್ವರ ತಾಲೂಕಿನ ಸವನಹಳ್ಳಿ ಮತ್ತು ಹೊನಗನಹಳ್ಳಿ ಗ್ರಾಮಗಳನ್ನು ವಿಜಯಪುರಕ್ಕೆ ಮರು ಸೇರ್ಪಡೆ ಮಾಡಿ ಸರಕಾರ ಆದೇಶ ಹೊರಡಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಮತ್ತು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಗೋವಾದಿಂದ ಮಾಹಿತಿ ನೀಡಿದ ಅವರು, ಹೊಸ ತಾಲೂಕುಗಳ ರಚನೆ ಸಂದರ್ಭದಲ್ಲಿ ಸವನಹಳ್ಳಿ ಮತ್ತು ಹೊನಗನಹಳ್ಳಿ ಗ್ರಾಮಗಳನ್ನು ನೂತನ ಬಬಲೇಶ್ವರ ತಾಲೂಕಿಗೆ ಸೇರ್ಪಡೆ ಮಾಡಲಾಗಿತ್ತು. ಆದರೆ, ಸರಕಾರದ ಈ ನಿರ್ಧಾರದಿಂದಾಗಿ ಎರಡೂ ಗ್ರಾಮಗಳ ಜನರಿಗೆ ತೊಂದರೆಯಾಗಿತ್ತು. […]