ವಿಜಯಪುರ: ಕೇಂದ್ರ ಬಜೆಟ್ ಪಂಚರಾಜ್ಯ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿದ ಭಿತ್ತಿ ಪತ್ರದಂತೆ ಭಾಸವಾಗುತ್ತಿದೆ ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಟೀಕಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಹಣಕಾಸು ನಿರ್ಮಲಾ ಸೀತಾರಾಮನ ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದೆ. ಆಡಳಿತ ಪಕ್ಷದ ಸದಸ್ಯರು ಮೇಜುಕುಟ್ಟಿ ಸ್ವಾಗತಿಸುವುದನ್ನು ನೋಡಿದರೆ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಂತಿದೆ. ಇದರಿಂದ ಮಧ್ಯಮ ಹಾಗೂ ಬಡ ಮಧ್ಯಮ ವರ್ಗದ ಭಾರತೀಯರ ಕನಸುಗಳನ್ನು ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಬಜೆಟನ ಘೋಷಣೆಗಳು ಘೋಷಣೆಗಳಾಗಿಯೇ ಉಳಿದರೆ ಅಭಿವೃದ್ಧಿ ಹೇಗೆ ಸಾಧ್ಯ? .ಬಿಜೆಪಿ ಆಡಳಿತವಿರುವ ಬಹುತೇಕ ರಾಜ್ಯಗಳ ಸರಕಾರಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕರ್ನಾಟಕದಲ್ಲಿ 40 ಪರ್ಸೆಂಟೇಜ್ ಸರಕಾರ ಇದೆ ಎಂದು ಎಲ್ಲಾ ರಂಗದವರು ಟೀಕಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯದಿಂದ ನಿರೀಕ್ಷಿಸುವುದಾದರೂ ಏನಿದೆ ?ಇದೊಂದು ಕೆಲವು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಈ ಬಜೆಟ್ ಬಿತ್ತಿ ಪತ್ರದ೦ತೆ ಭಾಸವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಒಟ್ಟಾರೆಯಾಗಿ ಇದೊಂದು ನಿರಾಶಾದಾಯಕ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮುಖಂಡ ಸಂಗಮೇಶ ಬಬಲೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.