ಅಕ್ಕಮಹಾದೇವಿ ಮಹಿಳಾ ವಿವಿ ನೂತನ ಕುಲಸಚಿವರಾಗಿ ಎಂ. ಎನ್. ಚೋರಗಸ್ತಿ ಅಧಿಕಾರ ಸ್ವೀಕಾರ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಕೆಎಎಸ್ ಅಧಿಕಾರಿ ಎಂ. ಎನ್ .ಚೋರಗಸ್ತಿ ಅವರು ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಭಾರ ಕುಲಸಚಿವರಾಗಿದ್ದ ಪ್ರೊ. ಕೆ. ರಮೇಶ ಅವರು ಎಂ. ಎನ್. ಚೋರಗಸ್ತಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ಉಪಕುಲಸಚಿವ ಡಾ. ಗವಿಸಿದ್ದಪ್ಪ ಆನಂದಹಳ್ಳಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌