ಎರಡನೇ ಬಾರಿ ಎಂ ಎಲ್ ಸಿ ಆಗಿ ಸುನೀಲಗೌಡ ಪಾಟೀಲ ಪ್ರಮಾಣ ವಚನ ಸ್ವೀಕಾರ- ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಕಾಂಗ್ರೆಸ್ ಮುಖಂಡರಿಂದ ಶುಭ ಕೋರಿಕೆ

ಬೆಂಗಳೂರು: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಎರಡನೇ ಬಾರಿಗೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ ಚುನಾವಣೆಯಲ್ಲಿ ಕಾಂಗ್ರೆಸ್‍ ಅಭ್ಯರ್ಥಿ ಸುನೀಲಗೌಡ ಪಾಟೀಲ ಮೊದಲ ಸುತ್ತಿನಲ್ಲಿಯೇ 3000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿ, ಎರಡನೇ ಬಾರಿಗೆಆಯ್ಕೆಯಾಗಿದ್ದರು.  ಪ್ರಮಾಣ ವಚನ ಸ್ವೀಕರಿಸಿದ ನಂತರ ಸುನೀಲಗೌಡ ಪಾಟೀಲ ಸಭಾಪತಿ ಬಸವರಾಜ ಹೊರಟ್ಟಿ ಅವರ ಆಶೀರ್ವಾದ ಪಡೆದರು.   ಈ ಸಂದರ್ಭದಲ್ಲಿ ವಿಜಯಪುರ […]

ಅಂಬೇಡ್ಕರ ಓರ್ವ ಮಹಾನ ಸಾಮಾಜಿಕ ಚಿಂತಕರು, ಸಮಾನತೆಯ ಹರಿಕಾರರು- ರಿಯಾಜ್ ಫಾರೂಕಿ

ವಿಜಯಪುರ: ಸಂವಿಧಾನ ಕತೃ ಡಾ. ಬಾಬಾಸಾಹೇಬ್ ಅಂಬೇಡ್ಕರ ಓರ್ವ ಸಾಮಾಜಿಕ ಚಿಂತಕಕರು.  ಸಮಾನತೆಯ ಹರಿಕಾರಾಗಿದ್ದರು ಎಂದು ಸಿಕ್ಯಾಬ್ ಎ. ಆರ್. ಎಸ್. ಇನಾಮದಾರ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಅಧ್ಯಕ್ಷ ಡಾ. ರಿಯಾಜ ಫಾರೂಕಿ ಹೇಳಿದರು. ವಿಜಯಪುರ ನಗರದ ಜಲನಗರದಲ್ಲಿರುವ ಸಿಕ್ಯಾಬ್ ಎ ಆರ್ ಎಸ್ ಇನಾಮದಾರ ಕಲಾ, ವಿಜ್ಞಾನ, ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿದ್ಯಾರ್ಥಿನಿಯರಿಗೆ ಆಯೋಜಿಸಲಾದ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ […]

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಜನಸ್ಪಂದನ ಪೋರ್ಟಲ್ ಮೇಲ್ಬರ್ಜೆಗೆ- ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿ- ಪಿ. ಸುನೀಲ ಕುಮಾರ

ವಿಜಯಪುರ: ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸುವ ಜನಸ್ಪಂದನ ಪೋರ್ಟಲ್‌ನ್ನು ಮೇಲ್ಬರ್ಜೆಗೇರಿಸಿದ್ದು, ಇನ್ನು ಮುಂದೆಯೂ ಜನಸ್ಪಂದನ ಅಥವಾ ಪೋರ್ಟಲ್‌ನಲ್ಲಿಯೇ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯ ಮೂಲಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತದೆ.  ಮುಖ್ಯಮಂತ್ರಿಗಳು ನಿಗಾ ಇಡುವುದರಿಂದ ಅಧಿಕಾರಿಗಳು ಬಹಳ ಗಂಭೀರ ಹಾಗೂ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ.  ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಕೀಕೃತ ಸಾರ್ವಜನಿಕ ದೂರು ನಿವಾರಣಾ ವ್ಯವಸ್ಥೆ ಅನುಷ್ಠಾನದ ಕುರಿತು ಜಿಲ್ಲೆಯ ನಾನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ […]

ಸರಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು.  ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಸರಕಾರಿ ಔಷಧ ಮಳಿಗೆಗಗಳು ಸ್ಥಳೀಯ ಮಟ್ಟದಲ್ಲಿಯೇ ಇದ್ದು, ಅಗತ್ಯ ಔಷಧಗಳನ್ನು ಹೊಂದಿರಬೇಕು.  ದಾಸ್ತಾನು ಹಾಗೂ ಲೆಕ್ಕಪತ್ರಗಳೆಲ್ಲವೂ ಡಿಜಿಟಲೀಕರಣವಾಗಬೇಕು.  ಅನಗತ್ಯ ಔಷಧಗಳನ್ನು ಕೊಳ್ಳದೇ ಔಷಧಗಳ ಗುಣಮಟ್ಟವನ್ನು ಖಾತ್ರಿ ಪಡಿಸಿಕೊಳ್ಳಬೇಕು.  ಇತರೆ ರಾಜ್ಯಗಳಲ್ಲಿ […]

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೇಳುವೆ- ಕಳೆದ ಸಲ ಯತ್ನಾಳಗೆ ಟಿಕೆಟ್ ನೀಡಿದವರು ಪಶ್ಚಾತ್ತಾಪ ಪಟ್ಟಿದ್ದಾರೆ- ವಿಜಯಪುರದಲ್ಲಿ ಆಸ್ತಿಗಳು ಅಕ್ರಮವಾಗಿ ಪರಭಾರೆಯಾಗುತ್ತಿವೆ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಮುಂದಿನ ಬಾರಿ ನಾನೂ ಬಿಜೆಪಿ ಟಿಕೆಟ್ ಕೇಳುತ್ತೇನೆ. ಕಳೆದ ಬಾರಿ ಯತ್ನಾಳ ಅವರಿಗೆ ಬಿಜೆಪಿ ಟಿಕೆಟ್ ನೀಡಿದವರಿಗೆ ಈಗ ಸೂಕ್ತ ಅನುಭವವಾಗಿದೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾನು ಪಕ್ಷ ವಿರೋಧಿ ಕೆಲಸವನ್ನು ಎಂದೂ ಮಾಡಿಲ್ಲ, ಈ ಹಿಂದೆ ಟಿಕೇಟ್ ಕೈ ತಪ್ಪಿದಾಗ ಬಿಜೆಪಿ ಹಿರಿಯ ನಾಯಕರು ಪಕ್ಷ ಸಂಘಟನೆ ಮಾಡಿ, ವಿಜಯಪುರ ನಗರ ವಿಧಾನಸಭೆ […]

ದ್ರಾಕ್ಷಿ ನಾಡಿನಲ್ಲಿ ಗಮನ ಸೆಳೆದ ಮಂಜು ಮುಸುಕಿದ ವಾತಾವರಣ

ವಿಜಯಪುರ: ದ್ರಾಕ್ಷಿ ನಾಡು ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಬೆಳ್ಳಂಬೆಳಿಗ್ಗೆ ಬದಲಾಗಿದ್ದ ವಾತಾವರಣ ಗಮನ ಸೆಳೆದಿದೆ. ತಿಕೋಟಾ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಬೆಳ್ಳಂಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಉಂಟಾಗಿತ್ತು. ಪ್ರತಿ ದಿನ ಬೆಳಿಗ್ಗೆ 6ಕ್ಕೆ ಸೂರ್ಯೊದಯ ಆಗುತ್ತಿತ್ತು. ಆದರೆ, ಬೆ. 8 ಗಂಟೆಯಾದರೂ ಸೂರ್ಯ ದೇವನ ದರ್ಶನ ಆಗಿರಲಿಲ್ಲ. ತಿಕೋಟಾ ತಾಲೂಕಿನ ಬಾಬಾನಗರ, ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ, ಬಿಜ್ಜರಗಿ ಸೇರಿದಂತೆ ನಾನಾ ಗ್ರಾಮಗಳಲ್ಲಿ ಸಂಪೂರ್ಣ ಮಂಜು ಮುಸುಕಿದ ವಾತಾವರಣ ಸೃಷ್ಠಿಯಾಗಿತ್ತು. […]