ವಿಜಯಪುರ ಜಿ. ಪಂ. ಸಿಇಓ ಗೋವಿಂದ ರೆಡ್ಡಿ, ಇಂಡಿ ಎಸಿ ರಾಹುಲ ಶಿಂಧೆ ವರ್ಗಾವಣೆ- ಎಲ್ಲಿಗೆ ಗೊತ್ತಾ?

ವಿಜಯಪುರ: ರಾಜ್ಯ ಸರಕಾರ ನಾಲ್ಕು ಜನ ಐಎಎಸ್ ಅಧಿಕಾರಿಗಳನ್ನು ವರ್ಗವಾಣೆ ಮಾಡಿ ಆದೇಶ ಹೊರಡಿಸಿದೆ. ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಅವರನ್ನು ಬೀದರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಇತ್ತ ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿಕಾರಿಯಾಗಿರುವ ರಾಹುಲ ಶಿಂಧೆ ಅವರನ್ನು ವಿಜಯಪುರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಅದೇ ರೀತಿ ಬೀದರ ಜಿಲ್ಲಾಧಿಕಾರಿಯಾಗಿರುವ ರಾಮಚಂದ್ರನ್ ಆರ್. ಅವರನ್ನು ಬೆಂಗಳೂರಿನ ಪಿಯು ಶಿಕ್ಷಣ ಮಂಡಳಿ ನಿರ್ದೇಶಕರಾಗಿ […]

ಲಸಿಕಾರಣ ಕಾರ್ಯದಲ್ಲಿ ನಿರೀಕ್ಷಿತ ಗುರಿ ಸಾಧಿಸಲು ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ರಾಜ್ಯ ಹಾಗೂ ದೇಶದಲ್ಲೇ ಅತ್ಯಂತ ಪರಿಣಾಮಕಾರಿಯಾಗಿ ಲಸಿಕಾಕರಣ ಕೈಗೊಂಡಿರುವ ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆ ಮುಂಚೂಣಿಯಲ್ಲಿದ್ದು, ಇದೇ ಬದ್ಧತೆಯನ್ನು ಬೂಸ್ಟರ್ ಡೋಸ್ ನೀಡುವಲ್ಲಿಯೂ ತೋರಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ.  ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಕುರಿತು ನಾನಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ ಅವರು ಎರಡನೇ ಡೋಸ್ ಪಡೆದು ಒಂಭತ್ತು ತಿಂಗಳು ಪೂರೈಸಿದ ಎಲ್ಲರಿಗೂ ಇದು ಅನ್ವಯವಾಗುವಂತೆ ಕ್ರಮ ಕೈಗೊಂಡು, ಈ ಕಾರ್ಯದಲ್ಲಿಯೂ ಯಶಸ್ಸು ಸಾಧಿಸಬೇಕು […]

ಡಾ. ಮೃತ್ಯುಂಜಯಸ್ವಾಮಿ ರಚಿಸಿರುವ ಎನ್ಸಿಯಂಟ್ ಟು ರಿವರ್ಸ್ ಡಯಾಬಿಟಿಸ್ ಪುಸ್ತಕ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಡಾ. ಮೃತ್ಯುಂಜಯಸ್ವಾಮಿ ಅವರು ರಚಿಸಿರುವ ಎನ್ಸಿಯಂಟ್ ಟು ರಿವರ್ಸ್ ಡಯಾಬಿಟೀಸ್(Ancient to Reverse Diabetes) ಪುಸ್ತಕವನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.  ಈ ಸಂದರ್ಭದಲ್ಲಿ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ, ಪುಸ್ತಕದ ಲೇಖಕ ಡಾ, ಮೃತ್ಯುಂಜಯ ಸ್ವಾಮಿ, ಯುವ ಬ್ರಿಗೇಡ್ ಸಂಸ್ಥೆಯ ಚಕ್ರವರ್ತಿ ಸೂಲಿಬೆಲೆ ಮುಂತಾದವರು ಉಪಸ್ಥಿತರಿದ್ದರು.

ರಾಯಚೂರು ಘಟನೆ ಖಂಡಿಸಿ ವಿಜಯಪುರದಲ್ಲಿ ನಾನಾ ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ವಿಜಯಪುರ: ರಾಯಚೂರಿನಲ್ಲಿ ಅಂಬೇಡ್ಕರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಆರೊಪಿಸಿ ನಾನಾ ಪ್ರಗತಿಪರ ಸಂಘಟನೆಗಳ ಕಾರ್ಯಕರ್ಯರು ವಿಜಯಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ಯರು, ರಾಯಚೂರು ಜಿಲ್ಲಾ ನ್ಯಾಯದೀಶರ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಗಾಂಧಿಚೌಕ್, ಬಸವೇಶ್ವರ ಚೌಕ್ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಅಂಬೇಡ್ಕರ ಚೌಕಿನಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲದೇ, ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ […]

ಗ್ರಾಮ ಒನ್ ಕೇಂದ್ರಗಳ ಮೂಲಕ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ಗಳ ವಿತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿಗೆ ಮಂಜೂರಾತಿ ನೀಡಲಾಗಿದ್ದು, ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಜಿಲ್ಲಾಡಳಿತ ಹಾಗೂ ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್‍ಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಗ್ರಾಮ ಒನ್ ಸೇವಾ ಕೇಂದ್ರದ ಮೂಲಕ ಸರಕಾರ ತನ್ನ ಅಧಿಕಾರ ಮತ್ತು ಜವಾಬ್ದಾರಿ ಆಪರೇಟರ್ಸ್‍ಗಳಿಗೆ ವಹಿಸಲಾಗಿದೆ.  ಜನರ ಬಳಿ ಸೌಜನ್ಯದಿಂದ ವರ್ತಿಸಿ, […]

ಗಾಂಧೀಜಿ ಕನಸು ನನಸು ಮಾಡುವಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ- ಜಾವೀದ ಜಮಾದಾರ

ವಿಜಯಪುರ: ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಮತ್ತು ಜವಾಬ್ದಾರಿ ಮಹತ್ವದ್ದಾಗಿದೆ. ಯುವಕರು ದೇಶದ ಪ್ರಗತಿಯಲ್ಲಿ ಸಕ್ರೀಯರಾಗಬೇಕು. ರಾಷ್ಟ್ರೀಯ ಏಕತೆ ಸಮಗ್ರತೆ ಕಾಪಾಡಲು ಪಣತೊಡಬೇಕ ಉ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತರ ಫೆಡರೇಶನ್‌ದ ರಾಷ್ಟ್ರೀಯ ಅಧ್ಯಕ್ಷ ಡಾ. ಜಾವೀದ ಜಮಾದಾರ ಹೇಳಿದ್ದಾರೆ. ವಿಜಯಪುರದಲ್ಲಿ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೇಂದ್ರ ನೆಹರು ಯುವಕ ಕೇಂದ್ರ, ವಿಜಯಪುರ ಜಿಲ್ಲಾಡಳಿತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್., ಕ್ಷೇತ್ರ ಜನಸಂಪರ್ಕ ಇಲಾಖೆ, ಬಿ ಎಲ್ ಡಿ […]

ಲಿಂಗತ್ವ ಅಲ್ಪಸಂಖ್ಯಾತರು ಸರಕಾರದ ಯೋಜನೆಗಳಡಿ ಸ್ವಂತ ಉದ್ಯೋಗ ಕೈಗೊಳ್ಳಿ- ಪಿ. ಸುನೀಲ ಕುಮಾರ

ವಿಜಯಪುರ: ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿವೆ. ಲಿಂಗತ್ವ ಅಲ್ಪಸಂಖ್ಯಾತರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ಹಣಕಾಸಿನ ಸಹಾಯ ಒದಗಿಸುತ್ತಿದೆ. ಅದನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ. h ವಿಜಯಪುರ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಸಹಯೋಗದೊಂದಿಗೆ 2021-22 ನೇ ವರ್ಷದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಅಡಿಯಲ್ಲಿ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರರಿಗೆ ಆಯೋಜಿಸಲಾಗಿದ್ದ ಮೂರು […]