ಲಿಂಗತ್ವ ಅಲ್ಪಸಂಖ್ಯಾತರು ಸರಕಾರದ ಯೋಜನೆಗಳಡಿ ಸ್ವಂತ ಉದ್ಯೋಗ ಕೈಗೊಳ್ಳಿ- ಪಿ. ಸುನೀಲ ಕುಮಾರ

ವಿಜಯಪುರ: ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿವೆ. ಲಿಂಗತ್ವ ಅಲ್ಪಸಂಖ್ಯಾತರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ಹಣಕಾಸಿನ ಸಹಾಯ ಒದಗಿಸುತ್ತಿದೆ. ಅದನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ.

h

ವಿಜಯಪುರ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಸಹಯೋಗದೊಂದಿಗೆ 2021-22 ನೇ ವರ್ಷದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಅಡಿಯಲ್ಲಿ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರರಿಗೆ ಆಯೋಜಿಸಲಾಗಿದ್ದ ಮೂರು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಗೆ ವಾರ್ಷಿಕ (2014-15 ರಿಂದ ಇಲ್ಲಿಯವರೆಗೆ) ವಾರು ನಿಗದಿ ಪಡಿಸಿದ ಗುರಿಯನ್ವಯ ಈವರೆಗೆ 263 ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸ್ವಂತ ಉದ್ಯೋಗ ಪ್ರಾರಂಭಿಸಲು ಇಲಾಖೆಯಿಂದ ಪ್ರೋತ್ಸಾಹ ಧನ ನೀಡಲಾಗಿದೆ. ಇನ್ನುಳಿದವರಿಗೂ ಮುಂದಿನ ಆರ್ಥಿಕ ವರ್ಷದಲ್ಲಿ ಸ್ವಂತ ಉದ್ಯೋಗ ಕೈಗೊಳ್ಳಲು ಇಲಾಖೆಯಿಂದ ನೆರವನ್ನು ಒದಗಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಸರಲಾರದಿಂದ ಇರುವ ಎಲ್ಲಾ ಸಹಾಯ, ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ ಪಿ. ಸುನೀಲ‌ ಕುಮಾರ, ಎಲ್ಲ ಶಿಬಿರಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪ್ರಮಾಣ ಪತ್ರವನ್ನು ವಿತರಿಸಿ, ಸ್ವಂತ ಉದ್ಯಮವನ್ನು ಪ್ರಾರಂಭಿಸಿ ಸ್ವಾವಲಂಬಿ ಬದುಕನ್ನು ನಡೆಸಲು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ರಾಜೇಂದ್ರ ಡಿ. ಜೈನಾಪೂರ ಮಾತನಾಡಿ, ಉದ್ಯಮದಲ್ಲಿ ಯಶಸ್ಸನ್ನು ಜೀವನದಲ್ಲಿ ಯಶಸ್ವಿಯಾಗಲು ಸಂಸ್ಥೆಯಲ್ಲಿ ಕಲಿತ ವಿಷಯಗಳನ್ನು ಉದ್ಯಮದಲ್ಲಿ ಅಳವಡಿಸಿಕೊಳ್ಳಬೇಕು. ಕಠಿಣ ಪರಿಶ್ರಮದಿಂದ ದುಡಿಯುವ ಮೂಲಕ ಇಲಾಖೆಯಿಂದ ಪಡೆಯುವ ಸಹಾಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ಗೀತಾ ಗುತ್ತರಗಿಮಠ, ನವಸ್ಪೂರ್ತಿ ಸಂಸ್ಥೆಯ ಅಧ್ಯಕ್ಷ ಶಬ್ಬಿರ ಕಾಗಜಕೋಟೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಭಾರತಿ ಪಾಟೀಲ ಉಪಸ್ಥಿತರಿದ್ದರು.

ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ. ಕೆ. ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರುಡಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಬಸವರಾಜ ಸನಪಾ ನಿರೂಪಿಸಿ,, ವಂದಿಸಿದರು.

ಒಟ್ಟು 37 ಜನ ಲಿಂಗತ್ವ ಅಲ್ಪಸಂಖ್ಯಾತರು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು.

Leave a Reply

ಹೊಸ ಪೋಸ್ಟ್‌